ಹಂಪಿಗೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಭೇಟಿ
ವಿಜಯನಗರ : ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಇಂದು ವಿಶ್ವ ವಿಖ್ಯಾತ ಹಂಪಿಗೆ ಭೇಟಿ ನೀಡಿದರು.
ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ಪತ್ನಿ ಎಂ.ಉಷಾ ಹಾಗೂ ಕುಟುಂಬ ಸದಸ್ಯರೊಂದಿಗೆ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದರು.
ಅವರ ಭೇಟಿ ಹಿನ್ನೆಲೆಯಲ್ಲಿ ವಿರೂಪಾಕ್ಷೇಶ್ವರ ದೇವಸ್ಥಾನ, ವಿಜಯ ವಿಠಲ ದೇವಸ್ಥಾನದಲ್ಲಿ ಕೆಂಪು ನೆಲಹಾಸು ಹಾಕಲಾಗಿತ್ತು.
ದೇವರ ದರ್ಶನದ ಬಳಿಕ ಅವರು ಕೃಷ್ಣ ದೇವಸ್ಥಾನ, ಕಡಲೆಕಾಳು, ಸಾಸಿವೆಕಾಳು, ಕಮಲ ಮಹಲ್, ಮಹಾನವಮಿ ದಿಬ್ಬ, ವಿಜಯ ವಿಠಲ ದೇವಸ್ಥಾನಕ್ಕೆ ತೆರಳಿ ಕಲ್ಲಿನ ರಥ, ಸಪ್ತಸ್ವರ ಮಂಟಪ ಕಣ್ತುಂಬಿಕೊಂಡರು.
ಕೊರೊನಾ ಹರಡುವುದನ್ನು ತಡೆಯಲು ವಾರಾಂತ್ಯದಲ್ಲಿ ಹಂಪಿ ವೀಕ್ಷಣೆಗೆ ಸಾರ್ವಜನಿಕರಿಗೆ ಪ್ರವೇಶ ನಿಬರ್ಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಆದ್ರೆ ವೆಂಕಯ್ಯ ನಾಯ್ಡು ಭೇಟಿ ಪ್ರಯುಕ್ತ ಹಂಪಿಯಲ್ಲಿ ಇನ್ನಷ್ಟು ಹೆಚ್ಚಿನ ಭದ್ರತೆ ಕಲ್ಪಿಸಲಾಗಿತ್ತು.