ಮಂಡ್ಯ : ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್’ ಖ್ಯಾತಿಯ ಮೆಬಿನಾ ಮೈಕಲ್ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮಂಡ್ಯದ ನಾಗಮಂಗಲ ತಾಲೂಕಿನ ದೇವಿಹಳ್ಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಿನ್ನೆ ಸಂಜೆ 4.30ರ ವೇಳೆಗೆ ಸಂಭವಿಸಿದ ಅಪಘಾತದಲ್ಲಿ ಮೆಬಿನಾ ಅವರು ಕೊನೆಯುಸಿರೆಳೆದಿದ್ದಾರೆ.
ಮೆಬಿನಾ ಅವರು ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಟ್ರ‍್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ಆದಿಚುಂಚನಗಿರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ವೇಳೆ ಮಾರ್ಗ ಮಧ್ಯೆ ಮೆಬಿನಾ ಮೃತಪಟ್ಟಿದ್ದಾರೆ.
ಇನ್ನು ಪ್ಯಾಟೆ ಹುಡ್ಗೀರು ಹಳ್ಳಿ ಲೈಫು ರಿಯಾಲಿಟಿ ಶೋ 4ರ ವಿನ್ನರ್ ಆಗಿ ಮೆಬಿನಾ ಹೊರ ಹೊಮ್ಮಿದ್ದರು. ಸೀಸನ್ ಅಲ್ಲಿ ಹೆಚ್ಚು ಬಾರಿ ಮಹಾರಾಣಿಯಾಗಿ ಆಯ್ಕೆ ಆಗಿದ್ದರು.








