ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಕಲ್ಲು ತೂರಾಟದ ಘಟನೆಗೆ ಸ್ಥಳೀಯ ಶಾಸಕ ಕೆ.ಎಂ. ಉದಯ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.
ಪಟ್ಟಣದಲ್ಲಿ ನಡೆದ ಅಹಿತಕರ ಘಟನೆ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಈ ಘಟನೆ ಹಿಂದೆ ಯಾರೇ ಇದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಯಾರೂ ಆತಂಕಕ್ಕೊಳಗಾಗಬೇಡಿ, ಉದ್ವೇಗಕ್ಕೊಳಗಾಗಬೇಡಿ. ನಮ್ಮ ತಾಲ್ಲೂಕಿನ ಜನತೆ ಶಾಂತಿಪ್ರಿಯರು. ತಪ್ಪಿತಸ್ಥರನ್ನು ಸದೆಬಡಿದು ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ. ಜನರ ಜೊತೆ ನಾವು ಯಾವಾಗಲೂ ಇರುತ್ತೇವೆ, ಎಂದು ಅವರು ಭರವಸೆ ನೀಡಿದ್ದಾರೆ.
ಶಾಸಕರ ಈ ಪ್ರತಿಕ್ರಿಯೆಯು ಸ್ಥಳೀಯರಲ್ಲಿ ಶಾಂತಿ ಮತ್ತು ಸಮಾಧಾನ ಕಾಪಾಡಲು ಸಹಾಯವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.








