ಕೆಪಿಸಿಸಿ ಓಬಿಸಿ ಘಟಕದ ಅಧ್ಯಕ್ಷರಾಗಿ ಮಧು ಬಂಗಾರಪ್ಪ ನೇಮಕ
ಬೆಂಗಳೂರು : ಕಳೆದ 2021ರ ಜುಲೈನಲ್ಲಿ ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರಿದ ಮಧು ಬಂಗಾರಪ್ಪ ಅವರಿಗೆ ಎಐಸಿಸಿ ಹೊಸ ಜವಾಬ್ದಾರಿ ನೀಡಿದೆ.
ಕೆಪಿಸಿಸಿ ಓಬಿಸಿ ಘಟಕದ ಅಧ್ಯಕ್ಷರಾಗಿ ಮಧು ಬಂಗಾರಪ್ಪ ಅವರನ್ನು ನೇಮಿಸಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧಿಕೃತ ಆದೇಶ ಹೊರಡಿಸಿದೆ.
ಮತ್ತೊಂದು ಕಡೆ ಕೆಪಿಸಿಸಿ ಐಟಿ ಸೆಲ್ ಅಧ್ಯಕ್ಷರಾಗಿ ರಘುನಂದನ್ ರಾಮಣ್ಣ ಅವರನ್ನು ನೇಮಿಸಲಾಗಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಮಧುಬಂಗಾರಪ್ಪ ಅವರನ್ನು ಕಣಕ್ಕಿಳಿಸಲಾಗಿತ್ತು.
ಆದ್ರೆ ಶಿವಮೊಗ್ಗ ಲೋಕ ಕದನದಲ್ಲಿ ಮಧುಬಂಗಾರಪ್ಪ ಸೋಲು ಕಂಡರು.
ಅಂದಿನಿಂದ ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡಿದ್ದ ಮಧುಬಂಗಾರಪ್ಪ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಿಕೊಂಡರು.