ಜುಲೈ 30 ರಂದು ಕಾಂಗ್ರೆಸ್ ಗೆ ಮಧು ಬಂಗಾರಪ್ಪ Madhu Bangarappa saaksha tv
ಹುಬ್ಬಳ್ಳಿ : ಜುಲೈ 30 ರಂದು ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.
ಹುಬ್ಬಳ್ಳಿಯ ಗೋಕುಲ ಗಾರ್ಡನ್ ನಲ್ಲಿ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಬಗ್ಗೆ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿ ಮಠ ನೀಡಿದ್ದಾರೆ.
ಅಲ್ಲದೆ ಇದೇ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಜೆಡಿಎಸ್ ಘಟಕದ ಅಧ್ಯಕ್ಷ ಕಿರಣ್ ಹಿರೇಮಠ, ಜೆಡಿಎಸ್ ಮುಖಂಡ ಬಸವರಾಜ ಮಾಯಕರ್ ಸಹ ಕಾಂಗ್ರೆಸ್ ಸೇರಲಿದ್ದಾರೆ.
ಅಂದಹಾಗೆ ಮಧುಬಂಗಾರಪ್ಪ ಮಾರ್ಚ್ ತಿಂಗಳಿನಲ್ಲಿಯೇ ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದರು.
ಆದರೆ ಕೋವಿಡ್ ಕಾರಣದಿಂದಾಗಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಿರಲಿಲ್ಲ. ಈಗ ಜುಲೈ 30ರಂದು ಬೆಂಬಲಿಗರ ಜೊತೆ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ.