ಕೊರೊನಾ ಸೋಂಕಿತರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ್ರೆ ಪರಿಹಾರ ಸಿಗಲ್ಲ : ಮಾಧುಸ್ವಾಮಿ

1 min read
minister J C Madhuswamy Reaction on district in charge Saaksha tv

ಕೊರೊನಾ ಸೋಂಕಿತರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ್ರೆ ಪರಿಹಾರ ಸಿಗಲ್ಲ : ಮಾಧುಸ್ವಾಮಿ coronavirus-private-hospital fees

ತುಮಕೂರು : ಸರ್ಕಾರಿ ಆಸ್ಪತ್ರೆಗೆ ಸೇರದೇ ನೇರವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಕೊರೊನಾ ಸೋಂಕಿತರಿಗೆ ಸರ್ಕಾರದಿಂದ ಯಾವುದೇ ಪರಿಹಾರ ಸಿಗುವುದಿಲ್ಲ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಧುಸ್ವಾಮಿ, ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಕೋವಿಡ್ ಸೋಂಕಿತರು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಚಿಕಿತ್ಸೆ ಪಡೆಯಬೇಕು ಎಂದಿದ್ದಾರೆ.

coronavirus-private-hospital fees

ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಅಲ್ಲಿನ ವೈದ್ಯರು ಖಾಸಗಿ ಆಸ್ಪತ್ರೆಗೆ ರೆಫರ್ ಮಾಡಿದ್ರೆ, ಅಲ್ಲಿ ಚಿಕಿತ್ಸೆ ಪಡೆಯಬಹುದು.

ಇವೆರಡೂ ಆಗದೇ ನೇರವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಅದರ ಬಿಲ್ ಅನ್ನು ಸರ್ಕಾರಕ್ಕೆ ಕಳುಹಿಸಿದರೆ ಪರಿಹಾರ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd