ಕೊರೊನಾ ಕಂಟ್ರೋಲ್ ಗೆ ವೀಕೆಂಡ್ `ಲಾಕ್ ಡೌನ್’..!
1 min read
Madhya Pradesh : ಕೊರೊನಾ ಕಂಟ್ರೋಲ್ ಗೆ ವೀಕೆಂಡ್ `ಲಾಕ್ ಡೌನ್’..!
ಮಧ್ಯಪ್ರದೇಶ : ಕೊರೊನಾ ಎರಡನೇ ಅಲೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಧ್ಯಪ್ರದೇಶದ ನಗರ ಪ್ರದೇಶಗಳಲ್ಲಿ ಲಾಕ್‍ಡೌನ್ ಹೇರಿಕೆ ಮಾಡಲಾಗಿದೆ.
ನಾಳೆ ಸಂಜೆ 6 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ಲಾಕ್‍ಡೌನ್ ಜಾರಿ ಮಾಡಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ನಗರ ಪ್ರದೇಶಗಳಲ್ಲಿ ವಿಕೆಂಡ್ ಲಾಕ್ ಡೌನ್ ಜಾರಿ ಮಾಡಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆದೇಶ ಹೊರಡಿಸಿದ್ದಾರೆ.
ಅಲ್ಲದೆ ಮುಂದಿನ ದಿನಗಳಲ್ಲಿ ಸೋಂಕು ಪ್ರಸರಣ ತಡೆಯಲು ಇನ್ನಷ್ಟು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
ಜೊತೆಗೆ ನಗರ ಪ್ರದೇಶದಲ್ಲಿ ಕಂಟೈನ್‍ಮೆಂಟ್ ಝೋನ್ ಮಾಡಲು ಮಧ್ಯಪ್ರದೇಶ ಸರ್ಕಾರ ನಿರ್ಧಾರ ಮಾಡಿದೆ.
