Madhya Pradesh : ಪೊಲೀಸ್ ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ಬಿಜೆಪಿ ನಾಯಕಿ…
ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಜಾಗಕ್ಕೆ ದಾಳಿ ಮಾಡಿ ತಡೆದ ಕಾರಣಕ್ಕೆ ಪೊಲೀಸ್ ಅಧಿಕಾರಿಯೊಬ್ಬರಿಗೆ ಭಾರತೀಯ ಜನತಾ ಪಕ್ಷದ ನಾಯಕಿ ಚಪ್ಪಲಿಯಿಂದ ಹೊಡೆದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಸತ್ನಾ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಚಿತ್ರಕೂಟ ಪೊಲೀಸರು ಸೋಮವಾರ ರಾತ್ರಿ ಪ್ರದೇಶಕ್ಕೆ ತೆರಳಿದರು. ಸತ್ನಾ ಜಿಲ್ಲಾ ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ಸಾಧನಾ ಪಟೇಲ್ ಸೇರಿದಂತೆ ಅವರ ಕೆಲವು ಹಿಂಬಾಲಕರು ಅಲ್ಲಿದ್ದರು. ಈ ವೇಳೆ ಸಾಧನಾ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಅಧಿಕಾರಿಯೊಬ್ಬರಿಗೆ ಚಪ್ಪಲಿಯಿಂದ ಹೊಡೆದಿರುವ ವಿಡಿಯೋ ವೈರಲ್ ಆಗುತ್ತಿದೆ.
President of Chitrakoot Nagar Parishad Sadhna Patel beats a police constable with slipper, as police team stopped tractor trolleys allegedly involved in illegal mining.@DGP_MP pic.twitter.com/xdPO3C5uXm
— Yogendra Chandel (@Ritvip1987) January 17, 2023
ಈ ಪ್ರಕರಣದಲ್ಲಿ ನಗರಸಭೆ ಅಧ್ಯಕ್ಷೆ ಹಾಗೂ ಬಿಜೆಪಿ ನಾಯಕಿ ಸಾಧನಾ ಪಟೇಲ್ ಸೇರಿದಂತೆ ಎಂಟು ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತಹಸೀಲ್ದಾರ್‌ಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಐಪಿಸಿ ಸೆಕ್ಷನ್ 147, 148, 149, 294, 186, 353, 332, 379, 506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಸಾಧನಾ ಪಟೇಲ್ ಮತ್ತು ಇತರರ ವಿರುದ್ಧ ನಾವು ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.
Madhya Pradesh: BJP leader hits police officer with sandal…