ದಿ ಕಾಶ್ಮೀರ್ ಫೈಲ್ಸ್ ಚಿತ್ರ ನೋಡಲು ಪೊಲೀಸರಿಗೆ ರಜೆ ನೀಡಿದ ಸರಕಾರ – Saaksha Tv
ಮಧ್ಯಪ್ರದೇಶ: ದಿ ಕಾಶ್ಮೀರ್ ಫೈಲ್ಸ್’ ಚಿತ್ರ ನೋಡಲು ಮಧ್ಯಪ್ರದೇಶ ಸರಕಾರ ಅಲ್ಲಿನ ಪೊಲೀಸರಿಗೆ ರಜೆ ಘೋಷಣೆ ಮಾಡಿದೆ.
ನಿನ್ನೆಯಷ್ಟೇ ಈ ಚಿತ್ರಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡುತ್ತಿರುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಅಲ್ಲಿನ ಗೃಹ ಸಚಿವ ನರೋತ್ತಮ್ ಮಿಶ್ರಾ, ಸಿನಿಮಾ ವೀಕ್ಷಣೆ ಮಾಡಲು ರಾಜ್ಯದ ಪೊಲೀಸರಿಗೆ ರಜೆ ನೀಡುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡಿರುವ ದಿ ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ 1990ರಲ್ಲಿ ಕಾಶ್ಮೀರಿ ಪಂಡಿತರ ಮೇಲೆ ನಡೆದ ದೌರ್ಜನ್ಯದ ವಿಷಯವಾಗಿದೆ. ಈ ಚಿತ್ರಕ್ಕೆ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ಸಹ ವ್ಯಕ್ತಪಡಿಸಿದ್ದಾರೆ.