ಬೆಂಗಳೂರು: ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದ್ದು, ಕಮಲ್ ನಾಥ್ ಸರ್ಕಾರ ಬೀಳುವುದು ಬಹುತೇಕ ಖಚಿತವಾಗಿದೆ. ಈ ನಡುವೆ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರನ್ನು ಬಿಜೆಪಿ ನಾಯಕರು ಬೆಂಗಳೂರಿನ ರೆಸಾರ್ಟ್ ನಲ್ಲಿಟ್ಟಿದ್ದಾರೆ ಎಂದು ಸುದ್ದಿಯಾಗುತ್ತಿದ್ದಂತೆ ಕಾಂಗ್ರೆಸ್ ಕಟ್ಟಪ್ಪ ಡಿ.ಕೆ ಶಿವಕುಮಾರ್ ಅವರು ಅಖಾಡಕ್ಕೆ ಇಳಿದಿದ್ದಾರೆ. ಅಲ್ಲದೆ, ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರವನ್ನು ಉಳಿಸುವ ಕೆಲಸಕ್ಕೆ ಟ್ರಬಲ್ ಶೂಟರ್ ಮುಂದಾಗಿದ್ದಾರೆ. ಈ ಕುರಿತು ಇಂದು ಸುದ್ದಿಗಾರರ ಜೊತೆ ಮಾತನಾಡಿರುವ ಡಿ.ಕೆ. ಶಿವಕುಮಾರ್, “ಇದು ಪಕ್ಷದ ಆಂತರಿಕ ವಿಚಾರ. ಇದರಲ್ಲಿ ಬಿಜೆಪಿ ನಾಯಕರು ತಲೆಹಾಕುವ ಅಥವಾ ನಮ್ಮ ಶಾಸಕರಿಗೆ ರಕ್ಷಣೆ ನೀಡುವ ಅಗತ್ಯವಿಲ್ಲ. ನಮ್ಮ ಶಾಸಕರನ್ನು ನಾವು ನೋಡಿಕೊಳ್ಳುತ್ತೇವೆ. ಇನ್ನೂ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಶೀಘ್ರದಲ್ಲೇ ನಮ್ಮ ಅಸಮಾಧಾನಿತ ಶಾಸಕರನ್ನು ಸಂಪರ್ಕಿಸಿ ಮಾತನಾಡಿಸಲಾಗುವುದು ಮತ್ತು ಅವರ ಮನವೊಲಿಸಿ ಮತ್ತೆ ಪಕ್ಷಕ್ಕೆ ಕರೆತರಲಾಗುವುದು” ಎಂದು ತಿಳಿಸಿದ್ದಾರೆ.
ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ
ಬೆಂಗಳೂರು: ರಾಜಧಾನಿಯ ಜನಸಾಮಾನ್ಯರ ಸಾರಿಗೆಯಾದ ಬಿಎಂಟಿಸಿ ಬಸ್ ಪ್ರಯಾಣ ಇನ್ನು ಮುಂದೆ ದುಬಾರಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಹಲವು ದಿನಗಳಿಂದ ಕೇಳಿಬರುತ್ತಿದ್ದ ಬಸ್ ಟಿಕೆಟ್ ದರ...








