ವಸತಿ ಗೃಹದಲ್ಲಿ ಬೆಂಕಿ – ಮಧ್ಯಪ್ರದೇಶದ ಇಂದೋರ್‌ನಲ್ಲಿ 7 ಮಂದಿ ಸಜೀವ ದಹನ…
ಎರಡು ಮನೆಯ ಮಹಡಿಯೊಂದರಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು 7 ಮಂದಿ ಸಜೀವದಹನ ವಾಗಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನ ಸ್ವರ್ನ್‌ಬಾಗ್ ಕಾಲೋನಿ ನಡೆದಿದೆ.
ಶನಿವಾರ ಮುಂಜಾನೆ 3 ಗಂಟೆ ಸುಮಾರಿಗೆ ಮನೆಯಲ್ಲಿ ವಾಸವಿದ್ದವರು ಗಾಢ ನಿದ್ರೆಯಲ್ಲಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಬಹುತೇಕರು ಸುಟ್ಟಗಾಯಗಳಿಂದ ಮತ್ತು ನಿದ್ರೆಯಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ..
ಏಳು ಮಂದಿ ಸಜೀವ ದಹನಗೊಂಡರೆ 9 ಮಂದಿಯನ್ನು ಅಗ್ನಿಶಾಮಕ ಸಿಬ್ಬಂದಿ ಇದುವರೆಗೆ ರಕ್ಷಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದು. ಬೆಂಕಿಯನ್ನು ನಂದಿಸಿ ಸಹಜ ಸ್ಥಿತಿಗೆ ತರಲು ಮೂರು ಗಂಟೆ ಹಿಡಿಯಿತು ಎಂದು ಅಗ್ನಿಶಾಮಕ ಸಿಬ್ಬಂದಿ ಹೇಳಿದ್ದಾರೆ.
ಶಾರ್ಟ್ ಸರ್ಕ್ಯೂಟ್ ಆಗುವ ಮುನ್ನ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಕಾಣಿಸಿಕೊಂಡು ಕ್ರಮೇಣ ಇಡೀ ಮನೆಗೆ ವ್ಯಾಪಿಸಿದೆ ಎಂದು ಅವಘಡದ ಬಗ್ಗೆ ಹೇಳಲಾಗುತ್ತಿದೆ. ಘಟನೆಯ ಬಗ್ಗೆ ರಾಜ್ಯದ ಗೃಹ ಮತ್ತು ಇಂದೋರ್ ಉಸ್ತುವಾರಿ ಸಚಿವ ನರೋತ್ತಮ್ ಮಿಶ್ರಾ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.