ತಂದೆಯಿಂದಲೇ ಮಗಳ ಮೇಲೆ 3 ವರ್ಷಗಳ ಕಾಲ ನಿರಂತರ ಅತ್ಯಾಚಾರ
ಮಧ್ಯಪ್ರದೇಶ : ಪಾಪಿ ತಂದೆಯೋರ್ವ ತನ್ನ ಸ್ವಂತ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿರುವ ಹೇಯ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ಬೆಳಕಿಗೆ ಬಂದಿದೆ.. 19 ವರ್ಷದ ಮಗಳ ಮೇಲೆ ಕಳೆದ 3 ವರ್ಷಗಳಿಂದ ಸತತವಾಗಿ ಲೈಂಗಿಕ ದೌರ್ಜನ್ಯವೆಸಗುತ್ತಿದ್ದು, ಈತನ ಕುಕೃತ್ಯದ ಬಗ್ಗೆ ಸಂತ್ರಸ್ತೆಯ ತಾಯಿ (ಆರೋಪಿಯ ಪತ್ನಿ) ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ..
ಮೂರು ವರ್ಷಗಳ ಹಿಂದೆ ಮೊದಲ ಬಾರಿಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈತ ಮಗಳ ಮೇಲೆ ಅತ್ಯಾಚಾರವೆಸಗಿದ್ದ.. ಆಗ ಸಂತ್ರಸ್ತೆ ಇನ್ನೂ ಅಪ್ರಾಪ್ತೆಯಾಗಿದ್ದು, ಈ ವಿಚಾರವನ್ನ ಯಾರಿಗಾದರೂ ತಿಳಿಸಿದ್ರೆ ಆಕೆಯ ಸಹೋದರ ಹಾಗೂ ತಾಯಿಯನ್ನ ಮನೆಯಿಂದ ಹೊರಹಾಕುವುದಾಗಿ ಧಮ್ಕಿ ಹಾಕಿದ್ದ.. ಬಳಿಕ ನಿರಂತರ ಅತ್ಯಾಚಾರವೆಸಗಿದ್ದು, ಸಂತ್ರಸ್ತೆ ತಾಯಿಯ ಬಳಿ ಈ ಬಗ್ಗೆ ಹೇಳಿಕೊಂಡಿದ್ದಾಳೆ.. ಇದಾದ ಬಳಿಕ ಇಬ್ಬರೂ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.







