ಕೋವಿಡ್ ಗೆ ಬಲಿಯಾದವರ ಕುಟುಂಬಕ್ಕೆ ಉಚಿತ ಶಿಕ್ಷಣ, ಮಾಸಿಕ ಹಣ, ಬಡ್ಡಿರಹಿತ ಸಾಲ ಘೋಷಿಸಿದ ಮಧ್ಯಪ್ರದೇಶ ಸರ್ಕಾರ
ಮಧ್ಯಪ್ರದೇಶ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಇಂತಹ ಕಠಿಣ ಪರಿಸ್ಥಿತಿಯಲ್ಲಿ ಮಧ್ಯಪ್ರದೇಶದ ಸರ್ಕಾರ ಕರೊನಾದಿಂದ ಮೃತಪಟ್ಟವರ ಕುಟುಂಬಸ್ಥರಿಗೆ ನೆರವಾಗಲು ಮುಂದಾಗಿದೆ.. ಕೋವಿಡ್ನಿಂದ ಬಾಧಿತವಾಗಿರುವ ಕುಟುಂಬಗಳಿಗೆ ಮಾಸಿಕ 5 ಸಾವಿರ ರೂಪಾಯಿ ಹಾಗೂ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ ಉಚಿತವಾಗಿ ಶಿಕ್ಷಣವನ್ನು ನೀಡುವುದಾಗಿ ಹಾಗೂ ಬಡ್ಡಿ ರಹಿತ ಸಾಲ ನೀಡುವುದಾಗಿ ಘೋಷಿಸಿದೆ.
ಈ ಕುರಿತು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪ್ರಕಟಿಸಿದ್ದು, ಕುಟುಂಬಕ್ಕೆ ಆಸರೆಯಾಗಿದ್ದವರು ಸೋಂಕಿನಿಂದ ಮೃತಪಟ್ಟಿದ್ದರೆ ಅಂಥವರ ಕುಟುಂಬಗಳಿಗೆ ಸ್ವಉದ್ಯೋಗ ಕೈಗೊಳ್ಳಲು ಬಡ್ಡಿರಹಿತವಾಗಿ ಸರ್ಕಾರದಿಂದ ಸಾಲ ಒದಗಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ತಂದೆ-ತಾಯಿ, ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ, ಆ ಕುಟುಂಬಗಳು ಅರ್ಹರಲ್ಲದಿದ್ದರೂ ಉಚಿತವಾಗಿ ಪಡಿತರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.ಅಲ್ಲದೇ ಮಕ್ಕಳ ಕಾಳಜಿಯನ್ನು ಸರ್ಕಾರವೇ ವಹಿಸಲಿದೆ ಎಂದಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.