ವಿರೋಧಗಳ ನಡುವೆ ಮಧ್ಯಪ್ರದೇಶದಲ್ಲಿ ಕೃಷಿ ಮಸೂದೆಗಳಿಗೆ ಅನುಮೋದನೆ..!
ಭೋಪಾಲ್ : ಒಂದು ತಿಂಗಳಿನಿಂದಲೂ ಕೇಂದ್ರ ಸರ್ಕಾರ ಜಾರಿಗೆ ತಂದಿರೋ ಕೃಷಿ ಮಸೂದೆಗಳ ವಿರುದ್ಧ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ದೆಹಲಿಯಲ್ಲಿ ಅನ್ನದಾತರು ನಡೆಸುತ್ತಿರುವ ಅನಿರ್ದಾಷ್ಟಾವಧಿ ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದೆ.. ಇದರ ನಡುವೆಯೇ ಇದೀಗ ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ಮಧ್ಯಪ್ರದೇಶದಲ್ಲಿ ಜಾರಿಗೆ ತರಲಾಗಿದೆ. ಶಿವರಾಜ್ ಸಿಂಗ್ ಚೌಹಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ 3 ಕೃಷಚಿ ಮಸೂದೆಗಳಿಗೆ ಅನುಮೋದನೆ ಸಿಕ್ಕಿದೆ.
ಮಧ್ಯಪ್ರದೇಶದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಮಸೂದೆ 2020ಕ್ಕೆ ಅನುಮೋದನೆ ..!
ಇನ್ನೂ ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು. ಈ ಮಸೂದೆಗಳ ಬಗ್ಗೆ ಯಾವುದೇ ರೀತಿಯಾದ ಗೊಂದಲಗಳಿಲ್ಲ. ರಾಜ್ಯದ ಎಲ್ಲಾ 313 ಬ್ಲಾಕ್ಗಳಲ್ಲಿ ನಾವು ಈ ಕಾನೂನುಗಳ ಬಗ್ಗೆ ತರಬೇತಿಯನ್ನು ಆಯೋಜಿಸುತ್ತೇವೆ. ಇದರಿಂದ ನಮ್ಮ ರೈತರು ಅವುಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಬಹುದು ಮತ್ತು ಅವುಗಳಿಂದ ಹೇಗೆ ಪ್ರಯೋಜನ ಪಡೆಯಬೇಕು ಎಂಬುದನ್ನು ತಿಳಿದುಕೊಳ್ಳುತ್ತಾರೆ ಎಂದು ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನ ಸಮರ್ಥಿಸಿಕೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








