ಮಧ್ಯಪ್ರದೇಶದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಮಸೂದೆ 2020ಕ್ಕೆ ಅನುಮೋದನೆ ..!
ಬಲವಂತದ ಮತಾಂತರ ಪ್ರಕರಣಗಳನ್ನ ತಪ್ಪಿಸುವ ನಿಟ್ಟಿನಲ್ಲಿ ಮಧ್ಯಪ್ರದೇಶ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಅದರಂತೆ ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ್ಯ ಮಸೂದೆ 2020ಕ್ಕೆ ಇದೀಗ ಅನುಮೋದನೆ ಸಿಕ್ಕಿದೆ. ಸಿಎಂ ಶಿವರಾಜ್ ಸಿಂಗ್ ಚೌಹಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ಮಸೂದೆಯನ್ನ ಅನುಮೋದಿಸಲಾಗಿದೆ.
ಮಸೂದೆಯಲ್ಲಿ ಏನಿದೆ..
ಈ ಮಸೂದೆ ಅಡಿಯಲ್ಲಿ ಬಲವಂತವಾದ ಧಾರ್ಮಿಕ ಮತಾಂತರಕ್ಕೆ ಯತ್ನಿಸಿದರೆ 1-5 ವರ್ಷಗಳ ಕಾಲ ಜೈಲು ಶಿಕ್ಷೆ ಖಾಯಂ. ಜೊತೆಗೆ 25 ಸಾವಿರ ರೂಪಾಯಿಯಿಂದ 1 ಲಕ್ಷದ ವರೆಗೂ ದಂಡ ವಿಧಿಸಲಾಗುತ್ತೆ. ಇನ್ನೂ ಅಪ್ರಾಪ್ತ ವಯಸ್ಕ, ಮಹಿಳೆ ಅಥವಾ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರನ್ನ ಬಲವಂತವಾಗಿ ಮತಾಂತರಗೊಳಿಸಿದರೆ, ಕನಿಷ್ಠ 2-10 ವರ್ಷಗಳ ಜೈಲು ಶಿಕ್ಷೆ ಹಾಗೂ ಕನಿಷ್ಠ 50,000 ರೂಪಾಯಿ ದಂಡ ವಿಧಿಸಬಹುದಾಗಿದೆ.
ಯಾರಿಂದಲೂ ಜೆಡಿಎಸ್ ಅಲುಗಾಡಿಸಲು ಸಾಧ್ಯವಿಲ್ಲ : ಸಿದ್ದುಗೆ ಹೆಚ್ ಡಿಡಿ ಗುದ್ದು
ಇನ್ನೂ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರ, ಹಿಮಾಚಲ ಪ್ರದೇಶದಲ್ಲಿ ಈಗಾಗಲೇ ಲವ್ ಜಿಹಾದ್ ವಿರುದ್ಧದ ಕಾನೂನು ಜಾರಿಯಾಗಿದೆ. ಇದೀಗ ಮಧ್ಯಪ್ರದೇಶದಲ್ಲಿ ಬಲವಂತದ ಮತಾಂತರದ ವಿರುದ್ಧ ಕಾಯ್ದೆ ಜಾರಿಯಾಗಿದೆ. ಅಷ್ಟೇ ಅಲ್ಲದೇ ಸಚಿವ ಸಂಪುಟದಲ್ಲೀ ಕೇಂದ್ರ ಜಾರಿಗೆ ತಂದಿರುವ 3 ಕೃಷಿ ಕಾಯ್ದೆಗಳಿಗೂ ಸಹ ಅನುಮೋದನೆ ಸಿಕ್ಕಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








