ಮಧ್ಯಪ್ರದೇಶ: ಮಧ್ಯಪ್ರದೇಶದ ಸರ್ಕಾರ ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ರಾಜ್ಯದ ಸರ್ಕಾರಿ ಉದ್ಯೋಗಗಳನ್ನು ಕೇವಲ ರಾಜ್ಯ ನಾಗರಿಕರಿಗೆ ಮಾತ್ರ ಮೀಸಲಿಡಲಾಗುವುದು ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾನ್ ಅವರು ಘೋಷಣೆ ಮಾಡಿದ್ದಾರೆ. ಮಧ್ಯಪ್ರದೇಶ ನಾಗರಿಕರಿಗೆ ಸರ್ಕಾರಿ ಉದ್ಯೋಗಗಳ ಮೀಸಲಾತಿಗೆ ಸಂಬಂಧಿಸಿದ ಕಾನೂನು ಬದಲಾವಣೆಗಳನ್ನು ಶೀಘ್ರದಲ್ಲೇ ಪರಿಚಯಿಸಲಾಗುವುದು ಎಂದು ಇದೇ ವೇಳೆ ತಿಳಿಸಿದ್ದಾರೆ.
ಇನ್ನೂ ಕೇವಲ 3 ದಿನಗಳ ಹಿಂದೆಯಷ್ಟೇ ಸ್ಥಳೀಯ ಯುವಕರಿಗೆ ಆದ್ಯತೆ ನೀಡಲಾಗುವುದು, ಸರ್ಕಾರಿ ಉದ್ಯೋಗಗಳಿಗೆ ಸ್ಥಳೀಯ ಯುವಕರಿಗೆ ಆದ್ಯತೆ ನಿಡಲಾಗುವುದು ಎಂದು ಹೇಳಿದ್ದರು. ಇದೀಗ ಕೊಟ್ಟ ಮಾತನ್ನ ಉಳಿಸಿಕೊಮಡಿರುವ ಸಿಎಂ ಶಿವರಾಜ್ ಸಿಂಗ್ ಚೌಹಾನ್ ಅವರು ಮಹತ್ವದ ನಿರ್ಧಾರದ ಬಗ್ಗೆ ಬಹಿರಂಗಪಡಿಸಿದ್ದಾರೆ.








