ಕೊಡಗಿನ ಮಳೆ ಹಾನಿ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ
ಮಡಿಕೇರಿ : ಮಲೆನಾಡು ಪ್ರದೇಶದಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಅಬ್ಬರಿಸಿ ಬೊಬ್ಬಿರಿಯುತ್ತಿರುವ ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಭಾರಿ ಮಳೆಗೆ ಸಾಕಷ್ಟು ಹಾನಿ ಕೂಡ ಆಗಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ.
ಜಮೀನುಗಳಿಗೆ ನೀರು ನುಗ್ಗಿರುವ ಕಾರಣ ರೈತರು ಕಂಗಾಲಾಗಿದ್ದಾರೆ.
ಈ ಹಿನ್ನೆಲೆ ಈ ಹಾನಿ ಬಗ್ಗೆ ಅಧ್ಯಯನ ಮಾಡಲು ಕೇಂದ್ರ ತಂಡ ಕೊಡಗು ಜಿಲ್ಲೆಗೆ ಆಗಮಿಸಿ ಪರಿಶೀಲನೆ ನಡೆಸಿದೆ.
ಮಡಿಕೇರಿ ತಾಲೂಕಿನ ಸೀಮೆಹುಲ್ಲು ಕಜೆ ಬಳಿ ಉಂಟಾಗಿರುವ ಭೂಕುಸಿತ, ಕಾಫಿ ಬೆಳೆ ಹಾನಿ, ಮದೆನಾಡು ಬಳಿಯ ಕರ್ತೋಜಿ ಹೆದ್ದಾರಿ, ಕೊಯನಾಡು ಶಾಲೆ ಬಳಿ ಭೂಕುಸಿತ ಹಾಗೂ ಕಿಂಡಿ ಆಣೆಕಟ್ಟು ಪ್ರದೇಶವನ್ನು ವೀಕ್ಷಿಸಿದ್ದಾರೆ.

ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಆಶೀಸ್ ಕುಮಾರ್ ನೇತೃತ್ವದ ತಂಡದಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ಉಪ ನಿರ್ದೇಶಕಾರಾದ ಮಹೇಶ್ ಕುಮಾರ್, ಕೇಂದ್ರ ಇಂಧನ ಸಚಿವಾಲಯದ ಸಹಾಯಕ ನಿರ್ದೇಶಕರಾದ ಭವ್ಯ ಪಾಂಡೆ ತಂಡವು ಜಿಲ್ಲೆಯ ಭೂಕೂಸಿತ, ಬೆಳೆ ಹಾನಿ ಹಾಗೂ ಪ್ರವಾಹ ಪೀಡಿತ ಪ್ರದೇಶವನ್ನು ವೀಕ್ಷಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರಿಂದ ಮಾಹಿತಿ ಪಡೆದರು.