Basavalinga swamy | ಬಸವಸಿದ್ದಲಿಂಗ ಸ್ವಾಮೀಜಿ ಆತ್ಮಹತ್ಯೆ
ಬಸವಸಿದ್ದಲಿಂಗ ಸ್ವಾಮೀಜಿ ಆತ್ಮಹತ್ಯೆ
ಬೈಲಹೊಂಗಲದ ನೇಗಿನಹಾಳದಲ್ಲಿ ಘಟನೆ
ಮಡಿವಾಳೇಶ್ವರ ಮಠದ ಸ್ವಾಮೀಜಿ ಆತ್ಮಹತ್ಯೆ
ಮಹಿಳೆಯರ ಫೋನ್ ಕಾಲ್ ಆಡಿಯೋ ವೈರಲ್
ಬೆಳಗಾವಿ : ಮುರುಘಾ ಮಠದ ಶ್ರೀಗಳ ಲೈಂಗಿಕ ಕಿರುಕುಳ ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದೆ.
ಈ ಪ್ರಕರಣ ತನಿಖೆಯ ಹಂತದಲ್ಲಿ ಇರುವಾಗಲೇ ಮಹಿಳೆಯರಿಬ್ಬರ ಫೋನ್ ಕಾಲ್ ಆಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಈ ಆಡಿಯೋದಲ್ಲಿ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವ ಸಿದ್ದಲಿಂಗ ಸ್ವಾಮೀಜಿಗಳ ಹೆಸರನ್ನು ಉಲ್ಲೇಖಿಸಲಾಗಿತ್ತು.

ಈ ಆಡಿಯೋ ವೈರಲ್ ಆಗುತ್ತಿರುವ ಬೆನ್ನಲ್ಲೆ ಇದೀಗ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವ ಸಿದ್ದಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ವಾಮೀಜಿಗಳ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದ್ರೂ, ಆಡಿಯೋದಿಂದಲೇ ಈ ನಿರ್ಧಾರಕ್ಕೆ ಬಂದರಬಹುದು ಎಂದು ಶಂಕಿಸಲಾಗುತ್ತಿದೆ.
ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಸ್ವಾಮೀಜಿ ನೇಣು ಬಿಗಿದುಕೊಂಡಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಬೈಲಹೊಂಗಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮತ್ತಷ್ಟು ಇನ್ನಷ್ಟೆ ತಿಳಿಯಬೇಕಾಗಿದೆ.