ಧಾರವಾಡ: ಅಖಂಡ ಭಾರತದಲ್ಲಿ ಸದ್ಯ ರಾಮನ ಜಪ ಬಿಟ್ಟು ಬೇರೇನೂ ಇಲ್ಲದಂತಾಗಿದೆ. ಜ.22 ರಂದು ಅಯೋಧ್ಯೆಯಲ್ಲಿ (Ayodhya) ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಲಿದ್ದು, ಈ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ.
ಅಯೋಧ್ಯೆಯಿಂದ ಬಂದ ಮಂತ್ರಾಕ್ಷತೆ (Mantrakshate) ಹಾಗೂ ಪ್ರಭು ಶ್ರೀರಾಮಚಂದ್ರನ ಫೋಟೋಗಳನ್ನು ಜ.22 ರಂದು ಪೂಜೆ ಮಾಡಲು ಎಲ್ಲೆಡೆ ವಿತರಿಸಲಾಗುತ್ತಿದೆ. ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮಕ್ಕೆ ಅಯೋಧ್ಯೆಯಿಂದ ಬಂದ ಮಂತ್ರಾಕ್ಷತೆ ಹಾಗೂ ಶ್ರೀರಾಮನ ಭಾವಚಿತ್ರಗಳನ್ನು ಅದ್ಧೂರಿಯಾಗಿ ಮೆರವಣಿಗೆ ಮಾಡಿ, ಜನರು, ಪಾವನರಾಗಿದ್ದಾರೆ.
ಆರ್‌ಎಸ್‌ಎಸ್ ಕಾರ್ಯಕರ್ತರು, ಹಿಂದೂ ಕಾರ್ಯಕರ್ತರು ಸೇರಿದಂತೆ ಗ್ರಾಮಸ್ಥರೆಲ್ಲರೂ ಸೇರಿ ಭಜನಾ ಮೆರವಣಿಗೆ ಮಾಡುವುದರೊಂದಿಗೆ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ.








