ತೈವಾನ್ ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ.
ತೈವಾನ್ ನ ಕರಾವಳಿ ಪ್ರದೇಶದಲ್ಲಿ 7.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ರಾಜಧಾನಿ ತೈಪೆಯನ್ನು ನಡುಗಿಸಿದೆ. ಭೂಕಂಪದಿಂದಾಗಿ ನಗರದ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ದಕ್ಷಿಣ ಜಪಾನ್ ಮತ್ತು ಫಿಲಿಪೈನ್ಸ್ ದ್ವೀಪಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ.
ಭೂಕಂಪದಿಂದಾಗಿ ಪೂರ್ವ ತೈವಾನ್‌ನಲ್ಲಿ ಹಲವಾರು ಕಟ್ಟಡಗಳು ಕುಸಿದಿವೆ. ಆದರೆ, ಯಾವುದೇ ಸಾವು-ನೋವು ಸಂಭವಿಸಿರುವ ಕುರಿತು ವರದಿಯಾಗಿಲ್ಲ.
ತೈವಾನ್ ಮತ್ತು ಓಕಿನಾವಾ, ಜಪಾನ್ ಮತ್ತು ಫಿಲಿಪೈನ್ಸ್‌ನಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ತೈವಾನ್‌ನಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ.