ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಳ್ವಾದಲ್ಲಿನ ಛತ್ರಪತಿ ಶಿವಾಜಿ ಮಹಾರಾಜ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 17 ರೋಗಿಗಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಈ ಸಾವಿನ ಹಿನ್ನೆಲೆ ಕಂಡುಕೊಳ್ಳುವುದಕ್ಕಾಗಿ ಆಸ್ಪತ್ರೆಯ ಅಧಿಕಾರಿಗಳ ತನಿಖಾ ತಂಡವನ್ನು ರಚಿಸಲಾಗಿದೆ. ಥಾಣಎ ಮುನ್ಸಿಪಲ್ ಕಾರ್ಪೊರೇಷನ್ ಈ ಆಸ್ಪತ್ರೆಯನ್ನು ನಿರ್ವಹಣ ಮಾಡುತ್ತದೆ. ಆಸ್ಪತ್ರೆಯ ಡೀನ್ ಡಾ. ರಾಕೇಶ್ ಬಾರೋಟ್ ಅವರು 16 ರೋಗಿಗಳ ಸಾವನ್ನಪ್ಪಿ ಈಗಾಗಲೇ ಖಚಿತಪಡಿಸಿದ್ದಾರೆ.
ವಯಸ್ಸಾದವರೇ ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪಿದ್ದಾರೆ. ಆಗಸ್ಟ್ 10ರಂದು ಕೇವಲ ಐದು ಗಂಟೆಯೊಳಗೆ ಐವರು ರೋಗಿಗಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. ಹೀಗಾಗಿ ರಾಜ್ಯ ಮಟ್ಟದ ಸಮಿತಿ ರಚಿಸಲಾಗಿದೆ. ಈ ಸಾವುಗಳಿಗೆ ವೈದ್ಯಕೀಯ ಕಾರಣವಾಗಿದ್ದರೆ ಅದನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸಮಿತಿಯು ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.








