Maha Shivratri | ನಂದಿ ಗಿರಿಧಾಮ ಶಿವೋತ್ಸವದ ಕಾರ್ಯಕ್ರಮಗಳು..!
ಚಿಕ್ಕಬಳ್ಳಾಪುರ : ಮಹಾಶಿವರಾತ್ರಿ ದಿನ ನಂದೀ ಕ್ಷೇತ್ರದಲ್ಲಿ ವಿಭಿನ್ನ ಮತ್ತು ವೈಭವದ ಶಿವೋತ್ಸವ ಆಚರಿಸಲು ತೀರ್ಮಾನ ಮಾಡಲಾಗಿದೆ.
ಮಾರ್ಚ್ 1 ರ ಸಂಜೆ 6 ಗಂಟೆಗೆ ಆರಂಭವಾಗಿ, ಬೆಳಗ್ಗೆ ರಥೋತ್ಸವ ನಡೆಯುವ ತನಕ ನಿರಂತರವಾಗಿ ಸಾಂಸ್ಕೃತಿಕ, ಭಕ್ತಿ ಹಾಗೂ ಜಾಗರಣೆ ಕಾರ್ಯಕ್ರಮಗಳು ನಡೆಯಲಿವೆ ಎಂದು ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.
ಶಿವೋತ್ಸವದಲ್ಲಿ ರಾಷ್ಟ್ರೀಯ ಮಟ್ಟದ ಸಂಗೀತ, ನಾಟ್ಯ ಕಲಾವಿದರು, ಚಿತ್ರ ತಾರೆಯರು ಕೂಡ ಇದರಲ್ಲಿ ಭಾಗಿಯಾಗಲಿದ್ದಾರೆ.
ಸುಮಾರು 25 ಹೆಸರಾಂತ ವಿವಿಧ ತಂಡಗಳು ಭಾಗವಹಿಸಲಿವೆ. ನಗೆ ಹಬ್ಬ ಕೂಡ ಇರಲಿದೆ.
ಜಾನಪದ ಕಲೆಗಳು, ಭರತ ನಾಟ್ಯ ಕೂಡ ಆಕರ್ಷಣೆಯಾಗಿರಲಿದೆ. ಮಧ್ಯಾಹ್ನ 1 ಗಂಟೆಯಿಂದ ಹಿಡಿದು, ಮುಂದಿನ ದಿನ ರಥೋತ್ಸವ ಆಗುವ ತನಕ ನಿರಂತರ ಅನ್ನ ಸಂತರ್ಪಣೆ ನಡೆಯಲಿದೆ.
ನಂದಿ ಬೆಟ್ಟದಲ್ಲಿ ದೀಪಾಲಂಕಾರ, ಲೇಸರ್ ಶೋ ಇರಲಿದೆ. ಸುಮಾರು 2 ಲಕ್ಷ ಜನರು ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.
20 ರಿಂದ 25 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ. 3 ಸಾವಿರ ಫೋರ್ ವ್ಹೀಲರ್ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
5 ಸಾವಿರ ದ್ವಿಚಕ್ರವಾಹನಗಳ ಪಾರ್ಕಿಂಗ್ ಗೆ ವ್ಯವಸ್ಥೆ ಕಲ್ಪಿಸಲಾಗುವುದು. ಊಟದ ವ್ಯವಸ್ಥೆಗೆ 25 ರಿಂದ 30 ಕೌಂಟರ್ 24 ಗಂಟೆಯೂ ಕಾರ್ಯನಿರ್ವಹಿಸಲಿದೆ.
ದೇವಾಸ್ಥಾನದ ಆವರಣದಲ್ಲಿ 25 ರಿಂದ 40 ಮಳಿಗೆಗಳು ಸ್ಥಳೀಯ ವಸ್ತುಗಳ ಪ್ರದರ್ಶನಕ್ಕೆ ಸೀಮಿತವಾಗಿರಲಿದೆ.
ಜಿಲ್ಲೆಯ ವಿಶೇಷತೆಗಳನ್ನು ಇಲ್ಲಿ ಪ್ರದರ್ಶನಕ್ಕೆ ಇಡಲಾಗುವುದು ಎಂದು ತಿಳಿಸಿದ್ದಾರೆ.
Maha Shivaratri Nandi hills shivotsav festival program









