ರಾಯ್ಪುರ: ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿಯಾಗಿರುವ ವ್ಯಕ್ತಿಯ ತಂದೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಛತ್ತೀಸ್‍ಗಢದ ದುರ್ಗ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸುಶೀಲ್ ದಾಸ್ (62) ಸಾವನ್ನಪ್ಪಿದ ವ್ಯಕ್ತಿ. ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಪ್ರಕರಣದಲ್ಲಿ ನಗದು ಕೊರಿಯರ್ ಆಗಿದ್ದ ಆಸಿಮ್ ದಾಸ್ ನ ತಂದೆ ಎನ್ನಲಾಗಿದೆ.
ಕಂಪನಿಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸುಶೀಲ್ ದಾಸ್ ಇತ್ತೀಚೆಗೆ ನಾಪತ್ತೆಯಾಗಿದ್ದರು. ಶವ ಅಂಡಾ ಪೊಲೀಸ್ ಠಾಣಾ ವ್ಯಾಪ್ತಿಯ ಅಚ್ಚೋಟಿ ಗ್ರಾಮದ ಬಾವಿಯಲ್ಲಿ ಪತ್ತೆಯಾಗಿದೆ. ಸಾವಿನ ಕುರಿತು ತನಿಖೆ ನಡೆಯುತ್ತಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ.