ಚನ್ನಪಟ್ಟಣದ ವಿಶ್ವದ ಎತ್ತರದ ಚಾಮುಂಡೇಶ್ವರಿ ವಿಗ್ರಹಕ್ಕೆ ಮಹಾಮಸ್ತಾಭಿಷೇಕ…
ರಾಮನಗರ ಜಿಲ್ಲೆಯ ಚನ್ನಪಟ್ಟಣದ ಗೌಡಗೆರೆಯಲ್ಲಿ ನೆಲೆನಿಂತಿರುವ ವಿಶ್ವದಲ್ಲೇ ಅತಿ ಎತ್ತರದ ಚಾಮುಂಡೇಶ್ವರಿ ತಾಯಿಯ ಭವ್ಯ ವಿಗ್ರಹಕ್ಕೆ ಇಂದು ಮಸ್ತಕಾಭಿಷೇಕ ವೈಭವ ಜರುಗಲಿದೆ.ಇದೇ ಮೊದಲ ಬಾರಿಗೆ ಸುಮಾರು 37,247 ಕೆ.ಜಿಯ 45 ಬಗೆಯ ದ್ರವ್ಯಗಳಿಂದ ಅಭಿಷೇಕ ನೆರವೇರಲಿವೆ.
35 ಸಾವಿರ ಕೆ.ಜಿ ತೂಕ, 68 ಅಡಿ ಎತ್ತರ, ಪಂಚಲೋಹಗಳಾದ ಚಿನ್ನ, ಬೆಳ್ಳಿ, ತಾಮ್ರ, ಕಂಚು, ಹಿತ್ತಾಳೆಯಿಂದ ತಯಾರಾಗಿ 18 ಭುಜಗಳುಳ್ಳ ಸೌಮ್ಯ ರೂಪದಲ್ಲಿ ನಿಂತಿರುವ ಚಾಮುಂಡಿ ವಿಗ್ರಹ ನೋಡಲು ಅಕರ್ಷಕವಾಗಿದೆ. ಕಳೆದ 4 ವರ್ಷಗಳಿಂದ ನಡೆಯುತ್ತಿದ್ದ ವಿಗ್ರಹ ತಯಾರಿ ಕಾರ್ಯ ಪೂರ್ಣಗೊಂಡು ಈ ಹಿಂದಿನ ಭೀಮನ ಅಮಾವಾಸ್ಯೆಯ ಶುಭದಿನದಂದೇ ಲೋಕಾರ್ಪಣೆಗೊಂಡಿದೆ.
ಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ದೇವಸ್ಥಾನದ ಧರ್ಮದರ್ಶಿ ಮಲ್ಲೇಶ್ ಗುರೂಜಿ ತಿಳಿಸಿದರು.
Mahamastakabhisheka for world’s tallest Chamundeshwari idol in Channapatnam…








