ಆದಷ್ಟು ಬೇಗ ರಾಮಮಂದಿರ ನಿರ್ಮಾಣ ಮಾಡಿ ಮಹಾಂತ ಪರಮಹಂಸ ದಾಸ್
ಅಯೋಧ್ಯೆ : ಆದಷ್ಟು ಬೇಗ ರಾಮಮಂದಿರ ನಿರ್ಮಾಣ ಮಾಡಬೇಕೆಂದು ಮಹಾಂತ ಪರಮಹಂಸ ದಾಸ್ ಒತ್ತಾಯಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಟ್ಯಂತರ ಜನರ ಆಕಾಂಕ್ಷೆಗಳನ್ನು ಈಡೇರಿಸುವಲ್ಲಿ ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಸಮಿತಿಗೆ ದೊಡ್ಡ ಜವಾಬ್ದಾರಿ ಇದೆ. ಕೇಂದ್ರ ಹಾಗೂ ರಾಜ್ಯದ ಎರಡೂ ಕಡೆ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದೆ. ಹೀಗಿರುವಾಗ ರಾಮ ಮಂದಿರವನ್ನು ಆದಷ್ಟು ಬೇಗ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ದೇವಾಲಯಕ್ಕಾಗಿ ದೀರ್ಘಕಾಲ ಕೆಲಸ ಮಾಡಿದ ಕೋಟ್ಯಂತರ ಜನರ ಆಕಾಂಕ್ಷೆಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಪಟ್ಟವರೆಲ್ಲರೂ ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ತೀವ್ರ ವಿರೋಧ ವ್ಯಕ್ತವಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.