ಲತಾ ಮಂಗೇಶ್ಕರ್ ನಿಧನಕ್ಕೆ ಸಾರ್ವಜನಿಕ ರಜೆ ಘೋಷಿಸಿದ ಮಹಾರಾಷ್ಟ್ರ
ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸುವ ಹಿನ್ನಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಸೊಮವಾರ ಸಾರ್ವಜನಿಕ ರಜೆ ಘೊಷಿಸಿದೆ. ಲತಾ ಮಂಗೇಶ್ಕರ್ ಅವರ ನಿಧನದ ಹಿನ್ನಲೆಯಲ್ಲಿ ದೇಶಾದ್ಯಂತ ಎರಡು ದಿನಗಳ ಕಾಲ ಶೋಕಾಚರಣೆ ಆಚರಿಸಲಾಗುತ್ತಿದೆ.
ಫೆಬ್ರವರಿ 6 ರಿಂದ 7 ರ ವರೆಗೆ ಭಾರತದಾದ್ಯಂತ ರಾಷ್ಟ್ರ ದ್ವಜವನ್ನ ಅರ್ಧ ಮಟ್ಟಕ್ಕೆ ಹಾರಿಸಲಾಗುತ್ತದೆ. ಕೇಂದ್ರ ಸರ್ಕಾರದ ಶೋಕಾಚರಣೆ ಆಚರಿಸಲು ನಿರ್ಧಸಿರುವ ಕಾರಣ ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. Maharashtra announces holiday on Monday to mourn Lata Mangeshkar’s death
ಗಾಯಕಿ ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆ ಮುಂಬೈನ ಶಿವಾಜಿ ಪಾರ್ಕ್ ನ ತೆರದ ಮೈದಾನದಲ್ಲಿ ನಡೆಯಲಿದೆ. ಸಂಜೆ ಪಾರ್ಥಿವ ಶರೀರವನ್ನ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು.
ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಕಮಿಷನರ್ ಇಕ್ಬಾಲ್ ಸಿಂಗ್ ಚಾಹಲ್ ಅವರು ಮಂಗೇಶ್ಕರ್ ಅವರ ಅಂತ್ಯಕ್ರಿಯೆಗೆ ಅಗತ್ಯ ವಸ್ತುಗಳ ಜೊತೆಗೆ ಸುಮಾರು 25 ಕೆಜಿ ಶ್ರೀಗಂಧವನ್ನು ವ್ಯವಸ್ಥೆ ಮಾಡಿದ್ದಾರೆ. ಉದ್ಯಾನವನದ ಸುಮಾರು 2,000 ಚದರ ಅಡಿ ಪ್ರದೇಶದಲ್ಲಿ ಬ್ಯಾರಿಕೇಡ್ ಹಾಕಿ ಭದ್ರತೆ ಕಾಯ್ದುಕೊಳ್ಳಲಾಗಿದೆ..