ಮಹಾ ಗಡಿ ವಿವಾದ – ಸುಪ್ರೀಂ ಕೋರ್ಟ್ ನಲ್ಲಿ ವಿವಾದ ಎದುರಿಸಲು ಸಿದ್ಧ ಎಂದ ಸಿ ಎಂ ಬೊಮ್ಮಾಯಿ…
ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಪ್ರೀಂ ಕೋರ್ಟ್ ನಲ್ಲಿ ವಿವಾದ ಎದುರಿಸಲು ಸಿದ್ಧಎಂದು ಹೇಳಿದ್ದಾರೆ.
ಇಂದು ಮಾಧ್ಯಮಗಳ ಮೂಲಕ ಮಾತನಾಡಿದ ಸಿ ಎಂ ಬಸವರಾಜ್ ಬೊಮ್ಮಾಯಿ.. ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಅವರು ಮಾಧ್ಯಮದ ಸಭೆ ಕರೆಸಿ, ಸುಪ್ರೀಂ ಕೋರ್ಟ್ ನಲ್ಲಿ ದಾವೆ ಇರುವಾಗಲೇ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಲು ಸಿದ್ಧ ಎಂದು ತಿಳಿಸಿದ್ದಾರೆ.
ನಾವು ಸರ್ವ ಪಕ್ಷಗಳ ಸಭೆ ಹಾಗೂ ಗಡಿ ಪ್ರಾಧಿಕಾರದಲ್ಲಿ ಕೈಗೊಂಡ ನಿರ್ಣಯಗಳಿಗೆ ಬದ್ಧರಾಗಿದ್ದೇವೆ. ಇನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣವನ್ನು ಎದುರಿಸುವ ನಿಟ್ಟಿನಲ್ಲಿ ಸಕಲ ಸಿದ್ಧತೆಗಳನ್ನು ಮಾಡುತ್ತೇವೆ.
ಮಹಾರಾಷ್ಟ್ರ ಸರ್ಕಾರವೇ ಸುಪ್ರೀಂ ಕೋರ್ಟ್ನಲ್ಲಿ ದಾವೆ ಹೂಡಿದೆ. ನಾವು ವಾದ ಮಂಡನೆಗೆ ಸಮರ್ಥವಾಗಿ ತಯಾರಿ ಮಾಡಿಕೊಂಡಿದ್ದೇವೆ. ಈ ಮಧ್ಯೆ ಮಾತುಕತೆ ನಡೆಸುವ ಕುರಿತು ಹೇಳಿಕೆ ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್ನಲ್ಲಿ ವಾದ ಮಾಡುವ ಬಗ್ಗೆ ಈ ಹಿಂದೆ ನಡೆದ ಸರ್ವಪಕ್ಷ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು ಎಂದು ಸಿಎಂ ಹೇಳಿದರು.
ಸದ್ಯ ನಮ್ಮ ಮುಂದೆ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸುವ ಉದ್ದೇಶ ಇದೆ. ಆದರೆ ಮಾತುಕತೆ ಬಗ್ಗೆ ಮಹಾರಾಷ್ಟ್ರ ಸಿಎಂ ಶಿಂಧೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ಗಡಿ ವಿಚಾರವೇ ಮುಗಿದು ಹೋಗಿದೆ. ಜತ್ ತಾಲೂಕು ಕರ್ನಾಟಕಕ್ಕೆ ಸೇರುವ ಬಗ್ಗೆ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳು ನಿರ್ಧರಿಸಿವೆ. ಇವೆಲ್ಲ ಸುಪ್ರೀಂಕೋರ್ಟ್ ಮುಂದೆ ವಾದ ಮಂಡನೆ ವೇಳೆ ಬರಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
Maharashtra Border Dispute – CM Bommai said that he is ready to face the controversy in the Supreme Court.