ಮಹಾರಾಷ್ಟ್ರ ರಾಸಾಯನಿಕ ಕಾರ್ಖಾನೆಯ ಘಟಕದಲ್ಲಿ ಸ್ಫೋಟ – 6 ಮಂದಿಗೆ ಗಾಯ
ಮುಂಬೈ : ರಾಸಾಯನಿಕ ಕಾರ್ಖಾನೆಯ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 6 ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ಸಂಭವಿಸಿದೆ..
ಬೊಯಿಸಾರ್ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಘಟಕದಲ್ಲಿ ತಡ ರಾತ್ರಿ ಸುಮಾರು 11.30ರ ವೇಳೆಗೆ ಸ್ಫೋಟ ಸಂಭವಿಸಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಬಳಿಕ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಸ್ಫೋಟದಿಂದಾಗಿ 6 ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಪೋಟಕ್ಕೆ ಇನ್ನೂವರೆಗೂ ನಿಖರ ಕಾರಣಗಳು ತಿಳಿದುಬಂದಿಲ್ಲ.
ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 43,071 ಮಂದಿಗೆ ಸೋಂಕು
ಪುಷ್ಕರ್ ಸಿಂಗ್ ಧಾಮಿ ಉತ್ತರಾಖಂಡದ ನೂತನ ಮುಖ್ಯಮಂತ್ರಿ..!
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.