ಶಿವಸೇನೆ ಮುಖ್ಯಸ್ಥರಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಆಯ್ಕೆ…
ಮಹಾರಾಷ್ಟ್ರದ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ ನಿನ್ನೆ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಶಿವಸೇನೆ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲಾಗಿದೆ.
ಏಕನಾಥ್ ಶಿಂಧೆ ಅವರು ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಗಳ ಪಡೆದ ನಂತರ ನಡೆದ ಶಿವಸೇನೆಯ ಮೊದಲ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇದಾಗಿದೆ. ರಾಜ್ಯ ಸಚಿವ ಮತ್ತು ಶಿವಸೇನೆ ನಾಯಕ ಉದಯ್ ಸಾಮಂತ್, ಈ ಕಾರ್ಯಕಾರಿ ಸಭೆಯಲ್ಲಿ ಸಿಎಂ ಏಕನಾಥ್ ಶಿಂಧೆ ಅವರನ್ನು ಪಕ್ಷದ ಮುಖ್ಯ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ವೀರ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ಪ್ರಸ್ತಾವನೆ ಸೇರಿದಂತೆ ಹಲವು ಮಹತ್ವದ ಪ್ರಸ್ತಾವನೆಗಳನ್ನು ಈ ಸಭೆಯಲ್ಲಿ ಮಂಡಿಸಲಾಯಿತು ಎಂದು ತಿಳಿಸಿದರು. ಇದಲ್ಲದೇ ರಾಜ್ಯದ ಎಲ್ಲ ಯೋಜನೆಗಳಲ್ಲಿ ಸ್ಥಳೀಯ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಿ, ಮರಾಠಿ ಭಾಷೆಗೆ ಗಣ್ಯ ಭಾಷೆಯ ಸ್ಥಾನಮಾನ ಕಲ್ಪಿಸುವ ಪ್ರಸ್ತಾವನೆಯನ್ನು ಮಂಡಿಸಲಾಯಿತು.
ಶಿಂಧೆ ಅವರು ಉದ್ಧವ್ ಠಾಕ್ರೆ ನೇತೃತ್ವದ ಪಕ್ಷದಿಂದ ಬೇರ್ಪಟ್ಟ ನಂತರ ಅವರೊಂದಿಗೆ ಕೆಲಸ ಮಾಡುತ್ತಿರುವ ಹಲವಾರು ಶಾಸಕರು, ಸಂಸದರು ಮತ್ತು ಇತರ ಶಿವಸೇನೆ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.
Maharashtra Chief Minister Eknath Shinde named Shiv Sena chief