ಮುಂಬೈ, ಮೇ 16 : ಮಹಾರಾಷ್ಟ್ರ ಪೊಲೀಸ್ ಇಲಾಖೆ ರಾಜ್ಯದಲ್ಲಿ ಇಲ್ಲಿಯವರೆಗೆ 1,140 ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ ಎಂದು ತಿಳಿಸಿದೆ.
ಸೋಂಕಿತರ ಪೈಕಿ 10 ಮಂದಿ ಮೃತಪಟ್ಟಿದ್ದರೆ, 268 ಸಿಬ್ಬಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ ಮತ್ತು 862 ಸಿಬ್ಬಂದಿಗಳು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ದೇಶದಲ್ಲಿ ಅತಿ ಹೆಚ್ಚು ಕೊರೋನಾ ಪ್ರಕರಣಗಳು ಮಹಾರಾಷ್ಟ್ರದಲ್ಲಿ ವರದಿಯಾಗಿದೆ. ಕೊರೋನಾ ಸೋಂಕಿನಿಂದ ಸಂಭವಿಸಿದ ಸಾವಿನಲ್ಲೂ ಮಹಾರಾಷ್ಟ್ರ ಮುಂದಿದೆ. ಇಲ್ಲಿಯವರೆಗೆ ಮಹಾರಾಷ್ಟ್ರದಲ್ಲಿ 29,100 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,068 ಜನ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...








