Maharashtra flood – ಮಹಾರಾಷ್ಟ್ರ ಪ್ರವಾಹಕ್ಕೆ 84 ಸಾವು; ಮುಂಬೈನಲ್ಲಿ ಅಲರ್ಟ್
ಮಹಾರಾಷ್ಟ್ರದಲ್ಲಿ ಕಳೆದ 10 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿರಿ ಉಂಟಾಗಿದ್ದು ಇಲ್ಲಿಯವರೆಗೆ 84 ಜನರು ಸಾವನ್ನಪ್ಪಿದ್ದು, 66 ಜನರು ಗಾಯಗೊಂಡಿದ್ದಾರೆ. ಭಾರತೀಯ ಹವಾಮಾನ ಇಲಾಖೆಯು ಮುಂಬೈ, ಥಾಣೆ, ಕೊಂಕಣ ಪ್ರದೇಶ ಮತ್ತು ಗಡ್ಚಿರೋಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ವಿಪತ್ತು ನಿರ್ವಹಣಾ ಅಧಿಕಾರಿಗಳ ಪ್ರಕಾರ, ಗಡ್ಚಿರೋಲಿ ಜಿಲ್ಲೆಯಲ್ಲಿ ಪ್ರವಾಹದಿಂದಾಗಿ 249 ಗ್ರಾಮಗಳು ಜಲಾವೃತಗೊಂಡಿವೆ. ಪ್ರವಾಹದಿಂದಾಗಿ ಸ್ಥಳಾಂತರಗೊಂಡ ಜನರಿಗಾಗಿ ಮೂವತ್ತೈದು ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ.
44 ಮನೆಗಳು ಸಂಪೂರ್ಣ ಹಾನಿಗೊಳಗಾಗಿದ್ದರೆ, 1,368 ಮನೆಗಳು, ಕಟ್ಟಡಗಳು ಭಾಗಶಃ ಹಾನಿಗೊಳಗಾಗಿವೆ. ಸುಮಾರು 180 ಪ್ರಾಣಿಗಳು ಸಾವನ್ನಪ್ಪಿವೆ. ಇಲ್ಲಿಯವರೆಗೆ, ರಾಜ್ಯ ಸರ್ಕಾರ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ವಿವಿಧ ಸ್ಥಳಗಳಿಂದ 5,968 ಜನರನ್ನು ಸ್ಥಳಾಂತರಿಸಲಾಗಿದೆ.
ಕಳೆದ 10 ದಿನಗಳಿಂದ ಸುರಿದ ಮಳೆಗೆ ರಾಜ್ಯದ ಅಣೆಕಟ್ಟು ಜಲಾಶಯಗಳು ಭಾಗಶಃ ಭರ್ತಿಯಾಗಿವೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದು, ಜನರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. 84 dead in Maharashtra floods; Mumbai on alert