ಮಹಾರಾಷ್ಟ್ರದಲ್ಲಿ 10 – 12ನೇ ತರಗತಿ ಪರೀಕ್ಷೆ ರದ್ದು..!
ಕೇವಿಡ್ 2ನೇ ಅಲೆ ಹಾವಳಿ ನಡುವೆ ವಿದ್ಯಾರ್ಥಿಗಳ ಹಿತಾದೃಷ್ಠಿಯಿಂದ ಮಹಾರಾಷ್ಟ್ರ ಸರ್ಕಾರವು 10 ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿ ಆದೇಶ ಹೊರಡಿಸಿದೆ. ಸಚಿವ ವಿಜಯ್ ವಾಡೆಟ್ಟಿವಾರ್ ಈ ಬಗ್ಗೆ ಖಚಿತಪಡಿಸಿದ್ದಾರೆ.
ಅಲ್ಲದೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಈ ಹಿಂದೆಯೇ ತಮ್ಮ ಭಾಷಣದಲ್ಲಿ ಪರೀಕ್ಷೆಗಳನ್ನು ರದ್ದುಪಡಿಸುವ ಕುರಿತು ಹೇಳಿದ್ದರು. ಗುರುವಾರ ಔಪಚಾರಿಕವಾಗಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಇನ್ನೂ ಕೇಂದ್ರ ಸರ್ಕಾರವು ಸಿಬಿಎಸ್‌ಇನ 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿದ ನಿರ್ಧಾರ ಪ್ರಕಟಿಸಿದ ಎರಡು ದಿನಗಳ ಬಳಿಕ ಮಹಾರಾಷ್ಟ್ರ ಸರ್ಕಾರವು ಈ ನಿರ್ಧಾರ ಕೈಗೊಂಡಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.