ಮಹಾರಾಷ್ಟ್ರ ಸರ್ಕಾರ ಲವ್ ಜಿಹಾದ್ ಹಾಗೂ ಬಲವಂತದ ಮತಾಂತರ ಪ್ರಕರಣಗಳನ್ನು ತಡೆಗಟ್ಟಲು ಸಕ್ರಿಯ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ 7 ಸದಸ್ಯರ ವಿಶೇಷ ಸಮಿತಿಯನ್ನು ರಚಿಸಿದ್ದು, ಮಹಾರಾಷ್ಟ್ರದ ಪೊಲೀಸ್ ಮಹಾನಿರ್ದೇಶಕರನ್ನು (DGP) ಈ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿದೆ.
ರಾಜ್ಯ ಸರ್ಕಾರದಿಂದ ಈ ಕುರಿತು ಅಧಿಕೃತ ಆದೇಶ ಹೊರಡಿಸಲಾಗಿದ್ದು, ಸಮಿತಿ ಲವ್ ಜಿಹಾದ್ ಹಾಗೂ ಬಲವಂತದ ಮತಾಂತರ ಸಂಬಂಧ ಅಧ್ಯಯನ ನಡೆಸಲಿದೆ. ಈ ಅಧ್ಯಯನದ ಮೂಲಕ, ಇಂತಹ ಪ್ರಕರಣಗಳನ್ನು ತಡೆಗಟ್ಟಲು ಹಾಗೂ ಸೂಕ್ತ ಕಾನೂನು ಕ್ರಮಗಳನ್ನು ಜಾರಿಗೆ ತರುವ ಕುರಿತು ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಲಿದೆ.
ರಾಜ್ಯದಲ್ಲಿ ಈ ಮಾದರಿಯ ಪ್ರಕರಣಗಳು ನಡೆಯುತ್ತಿರುವ ಬಗ್ಗೆ ಹಲವು ವರದಿ ಹೊರಬಿದ್ದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ನೂತನ ಕಾನೂನು ರಚನೆ ಅಗತ್ಯವಿದೆಯೇ ಎಂಬುದರ ಕುರಿತಂತೆ ಸಮಿತಿಯ ವರದಿ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಿದೆ.