IPL ಅಭಿಮಾನಿಗಳಿಗೆ ಬಿಗ್ ಶಾಕ್..! ಪ್ರೇಕ್ಷಕರಿಗೆ ಅವಕಾಶ ಡೌಟ್..!
ಐಪಿಎಲ್ ಅಭಿಮಾನಿಗಳಿಗೆ ಬಿಗ್ ಶಾಕ್..! ಈ ಬಾರಿಯೂ ಐಪಿಎಲ್ ಟೂರ್ನಮೆಂಟ್ ಪಂದ್ಯಗಳನ್ನು ಪ್ರೇಕ್ಷಕರಿಲ್ಲದೆ ನಡೆಯುವ ಸಾಧ್ಯತೆ ಇದೆ. ಈ ಹಿಂದೆ ಶೇಕಡಾ 25ರಷ್ಟು ಅಭಿಮಾನಿಗಳ ಅನುಮತಿ ಪಡೆದು ಟೂರ್ನಿ ಆರಂಭಿಸುವ ಕುರಿತು ಚರ್ಚೆ ನಡೆದಿತ್ತು. ಆದರೆ ಇದೀಗ ಮತ್ತೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಮಹಾರಾಷ್ಟ್ರ ಸರ್ಕಾರ ಈ ಅನುಮತಿಯನ್ನು ಹಿಂಪಡೆಯುವ ಸಾಧ್ಯತೆ ಹೆಚ್ಚಿದೆ.
ಈ ಬಾರಿಯ ಎಲ್ಲಾ ಐಪಿಎಲ್ ಪಂದ್ಯಗಳು ಮಹಾರಾಷ್ಟ್ರದಲ್ಲಿ ನಡೆಯಲಿದೆ. ಆದ್ರೆ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಇದು ಐಪಿಎಲ್ ಮೇಲೂ ಪರಿಣಾಮ ಬೀರಬಹುದು.
ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಈ ಬಗ್ಗೆ ಮಾತನಾಡಿದ್ದು, ನಾವು ಕೇಂದ್ರ ಸರ್ಕಾರದಿಂದ ಎಚ್ಚರಿಕೆ ವಹಿಸುವಂತೆ ಪತ್ರವನ್ನು ಸ್ವೀಕರಿಸಿದ್ದೇವೆ. ಯುರೋಪಿಯನ್ ರಾಷ್ಟ್ರಗಳು, ದಕ್ಷಿಣ ಕೊರಿಯಾ ಮತ್ತು ಚೀನಾದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಎಚ್ಚೆತ್ತು ಅಗತ್ಯ ಕ್ರಮಕೈಗೊಳ್ಳುವಂತೆ ಆರೋಗ್ಯ ಇಲಾಖೆ ಪತ್ರ ಬರೆದಿತ್ತು. ಆದರೆ, ನಾವು ಇದೀಗ ಐಪಿಎಲ್ ಪಂದ್ಯದ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ” ಎಂದಿದ್ದಾರೆ.
ಲೀಗ್ ಹಂತದ ಎಲ್ಲಾ 70 ಪಂದ್ಯಗಳು ಮಹಾರಾಷ್ಟ್ರದಲ್ಲಿ ನಡೆಯಲಿವೆ. ಮುಂಬೈನಲ್ಲಿ 55 ಮತ್ತು ಪುಣೆಯಲ್ಲಿ 15 ಪಂದ್ಯಗಳು ನಡೆಯಲಿವೆ. IPL-2022 ಮಾರ್ಚ್ 26 ರಿಂದ ಪ್ರಾರಂಭವಾಗಲಿದೆ.
maharashtra-govt-could-cancel-permission IPL









