ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ : ಬೊಮ್ಮಾಯಿ ಹೇಳಿಕೆ ಗಂಭೀರವಾಗಿ ಪರಿಗಣಿಸುವಂತೆ ಕಾಂಗ್ರೆಸ್ ನಾಯಕ ಒತ್ತಾಯ
ಇತ್ತೀಚೆಗೆ ಬೆಳಗಾವಿ ಮಹಾರಾಷ್ಟ್ರ ಗಡಿ ಭಾಗದಲ್ಲಿ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದು, MES ಪುಂಡರ ಅನಾಗರಿಕ ವರ್ತನೆ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಸಾಂಗ್ಲಿ ಜಿಲ್ಲೆಯ ಜತ್ತ ತಾಲ್ಲೂಕಿನ 40 ಗ್ರಾಮಗಳು ರಾಜ್ಯಕ್ಕೆ ಸೇರ್ಪಡೆಯಾಗಲು ಬಯಸಿರುವುದನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದ್ದು , ಅಲ್ಲದೇ ಬೆಳಗಾವಿ ಸೇರಿದಂತೆ ಮರಾಠಿ ಭಾಷಿಕರು ಹೆಚ್ಚಾಗಿರುವ ಇರುವ ಪ್ರದೇಶಗಳ ಒಂದು ಇಂಚು ಭೂಮಿಯನ್ನು ಕೂಡ ಬಿಟ್ಟುಕೊಡುವುದಿಲ್ಲ ಎಂದು ಬೊಮ್ಮಾಯಿ ಮಹಾರಾಷ್ಟ್ರಕ್ಕೆ ಖಡಕ್ ಉತ್ತರ ನೀಡಿದ್ರು..
ಇದೇ ವಿಚಾರವನ್ನ ಕಾಂಗ್ರೆಸ್ ನ ಮಹಾರಾಷ್ಟ್ರ ಘಟಕದ ಅಧ್ಯಕ್ಷ ನಾನಾ ಪಟೋಲೆ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದು , ಬೊಮ್ಮಾಯಿಯವರು ಕರ್ನಾಟಕ ವಿಧಾನಸಭೆಯಲ್ಲಿ ಸಾಂಗ್ಲಿಯ 40 ಗ್ರಾಮಗಳನ್ನ ರಾಜ್ಯಕ್ಕೆ ಸೇರಿಸಿಕೊಳ್ಳಲು ಬಯಸಿರುವುದನ್ನ ಸ್ವಾಗತಿಸುತ್ತೇವೆ ಎಂದಿದ್ದಾರೆ. ಬೊಮ್ಮಾಯಿ ಅವರ ಹೇಳಿಕೆಯನ್ನ ಗಂಭೀರವಾಗಿ ಪರಿಗಣಿಸಬೇಕು , ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಈ ಗ್ರಾಮಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬಗ್ಗೆ ಮಹಾರಾಷ್ಟ್ರ ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.







