ಮಹಾರಾಷ್ಟ್ರದಲ್ಲಿ ಜೂನ್ 15ರವರೆಗೆ ಲಾಕ್ ಡೌನ್ ವಿಸ್ತರಣೆ – ಉದ್ಧವ್ ಠಾಕ್ರೆ
ಮುಂಬೈ: ಕೋವಿಡ್ 2ನೇ ಅಲೆ ಅಬ್ಬರ ತಡೆಗೆ ದೇಶದ ಹಲವು ರಾಜ್ಯಗಳಲ್ಲಿ ಹೇರಲಾಹಿದ್ದ ಲಾಕ್ ಡೌನ್ ಅವಧಿಯನ್ನ ವಿಸ್ತರನೆ ಮಾಡಲಾಗ್ತಿದೆ.. ಕೊರೊನಾ ಹಾಟ್ ಸ್ಪಾಟ್ ಆಗಿರುವ ಮಹಾರಾಷ್ಟ್ರದಲ್ಲಿಯೂ ಕೋವಿಡ್ ಲಾಕ್ಡೌನ್ನನ್ನು ಜೂನ್ 15 ರವರೆಗೆ ವಿಸ್ತರಿಸಲಾಗಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಸಡಿಲಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಕೊರೊನಾ ಪಾಸಿಟಿವ್ ಶೇಕಡಾ ಪ್ರಮಾಣ 10 ಕ್ಕಿಂತ ಕಡಿಮೆ ಮತ್ತು ಆಕ್ಸಿಜನ್, ಬೆಡ್ಗಳು ಶೇಕಡಾ 40ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಹಂತ ಹಂತವಾಗಿ ತೆಗೆಯಲಾಗುತ್ತದೆ. ಮತ್ತೊಂದೆಡೆ ಪ್ರಕರಣಗಳು ಹೆಚ್ಚುತ್ತಿರುವ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ವಿಧಿಸಲಾಗುತ್ತದೆ.
ಹಲವಾರು ಮಂದಿ ಲಾಕ್ಡೌನ್ ತೆರವುಗೊಳಿಸದಿದ್ದರೆ, ಆಂದೋಲನ ನಡೆಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಅವರಿಗೆ ತಾಳ್ಮೆಯಿಂದ ಇರಬೇಕೆಂದು ನಾನು ವಿನಂತಿಸುತ್ತೇನೆ. ಅಲ್ಲದೆ ನಾವು ತುಂಬಾ ಕಟ್ಟುನಿಟ್ಟಾದ ಲಾಕ್ಡೌನ್ ವಿಧಿಸಿಲ್ಲ. ನಿರ್ಬಂಧಗಳನ್ನು ನಿಮ್ಮ ಮೇಲೆ ಹೇರಿ ನಾನು ಆನಂದಿಸುತ್ತಿಲ್ಲ. ಆದರೆ ಈ ಸಮಯದಲ್ಲಿ ನಿರ್ಬಂಧದ ಅವಶ್ಯಕತೆ ಇದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.