ಮುಂಬೈ : ಮಹಾರಾಷ್ಟ್ರದಲ್ಲಿ ಹೆಮ್ಮಾರಿ ಕೊರೊನಾ ವೈರಸ್ ಅಬ್ಬರ ಆರಂಭದಿಂದಲೂ ಜೋರಾಗಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಇದರ ಮಧ್ಯೆ ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಜುಲೈ 31ರವರೆಗೂ ಮಹಾರಾಷ್ಟ್ರ ಸರ್ಕಾರ ಲಾಕ್ ಡೌನ್ ವಿಸ್ತರಿಸಿದೆ. ಸೋಮವಾರ ಈ ಕುರಿತು ಸೂಚನೆ ನೀಡಿದ್ದು, ಜುಲೈ 31ರವರೆಗೂ ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್ ಪಾಲನೆ ಮಾಡಬೇಕೆಂದು ಸಾರ್ವಜನಿಕರಿಗೆ ತಾಕೀತು ಮಾಡಲಾಗಿದೆ.
ಲಾಕ್ ಡೌನ್ ಹಿನ್ನೆಲೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಅನಗತ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಕ್ಷುಲ್ಲಕ ಕಾರಣಕ್ಕಾಗಿ ಹೊರಗಡೆ ಓಡಾಡುವುದು ಸಹ ನಿರ್ಬಂಧಿಸಲಾಗಿದೆ.
ಇನ್ನು ಲಾಕ್ ಡೌನ್ ವಿಸ್ತರಣೆ ಹಿನ್ನೆಲೆ ಎಲ್ಲಾ ಜಿಲ್ಲಾಧಿಕಾರಿ ಮತ್ತು ರಾಜ್ಯದ ಮಹಾನಗರ ಪಾಲಿಕೆಗಳ ಆಯುಕ್ತರಿಗೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಸರ್ಕಾರ ಸೂಚಿಸಿದೆ. ಅಲ್ಲದೆ ಮಾಸ್ಕ್ ಧರಿಸುವುದು ಕಡ್ಡಾಯ ಹಾಗು ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ ಎಂದು ಎಚ್ಚರಿಕೆ ನೀಡಿರುವ ಸರ್ಕಾರ ನಿಯಮ ಉಲ್ಲಂಘಿಸಿದರೆ ಕ್ರಮ ಜರುಗಿಸಲಾಗುವುದು ಎಂದಿದೆ.