ಮಹಿಳೆಗೆ ಎಂಜಲು ನೆಕ್ಕುವ ಶಿಕ್ಷೆ ವಿಧಿಸಿದ ಪಂಚಾಯತ್ – ನ್ಯಾಯಕ್ಕಾಗಿ ಪೊಲೀಸರ ಮೊರೆ
ಮುಂಬೈ: ಕಾನೂನಿನ ಎಲ್ಲೆ ಮೀರಿ ಪಂಚಾಯತ್ ನಲ್ಲಿ ಆಗಾಗ ಗ್ರಾಮದ ಜನರ ಬಗೆಗಿನ ನಿರ್ಧಾರಗಳನ್ನ ಪ್ರಕಟಿಸುವುದು, ಕಠಿಣ ಶಿಕ್ಷೆ ವಿಧಿಸುವುದು.. ಇಂತಹ ಅನೇಕ ಪ್ರಕರಣಗಳು ಹಲೆಡೆ ನಡೆದಿವೆ.. ಅದ್ರಲ್ಲೂ ಮಹಿಳೆಯರೇ ಹೆಚ್ಚಾಗಿ ಟಾರ್ಗೆಟ್ ಆಗಿರುತ್ತಾರೆ. ಇದೀಗ ಮಹಾರಾಷ್ಟ್ರದಲ್ಲಿ ಅಂತಹದ್ದೇ ಮತ್ತೊಂದು ಹೇಯ ಕೃತ್ಯ ಬೆಳಕಿಗೆ ಬಂದಿದೆ..
ಮಹಿಳೆಯೊಬ್ಬಳು ತನ್ನ ಮೊದಲ ಪತಿಯಿಂದ ವಿಚ್ಛೇದನ ಪಡೆದು 2ನೇ ವಿವಾಹವಾಗಿದ್ದಕ್ಕೆ ಆಕೆಗೆ ಪಂಚಾಯತಿ ಎಂಜಲು ನೆಕ್ಕುವ ಶಿಕ್ಷೆ ವಿಧಿಸಿದೆ. ಈ ಘಟನೆ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ನಡೆದಿದೆ.. ಮಹಿಳೆಯು ಪಂಚಾಯತಿ ಆದೇಶ ತಿರಸ್ಕರಿಸಿ ಪೊಲೀಸರಿಗೆ ದೂರು ನೀಡಿದ್ದು, ಈ ಸಂಬಂಧ ಇದೀಗ ಪ್ರಕರಣ ದಾಖಲಾಗಿದೆ.
2015ರಲ್ಲಿ ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದ ಮಹಿಳೆ, 2019ರಲ್ಲಿ 2ನೇ ಮದುವೆಯಾಗಿದ್ದರು. ಸಂತ್ರಸ್ತೆ ನಾಥ್ ಜೋಗಿ ಸಮುದಾಯಕ್ಕೆ ಸೇರಿದವರಾಗಿದ್ದು, ಸ್ಥಳೀಯ ಪಂಚಾಯತ್ ಸದಸ್ಯರು ಮಹಿಳೆಯ ಎರಡನೇ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರು.
ಇದರಂತೆ ಮಹಿಳೆಯ 2ನೇ ವಿವಾಹದ ಬಗ್ಗೆ ಪಂಚಾಯತ್ ಸದಸ್ಯರು ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ. ಪಂಚಾಯತ್ ಸದಸ್ಯರು ಬಾಳೆ ಎಲೆ ಮೇಲೆ ಉಗುಳಲಿದ್ದು, ಅದನ್ನ ನೆಕ್ಕುವ ಶಿಕ್ಷೆ ನೀಡಿದ್ದಾರೆ. ಅಲ್ಲದೆ, ಮಹಿಳೆ 2ನೇ ಮದುವೆ ಮಾಡಿಕೊಂಡ ಶಿಕ್ಷೆಗಾಗಿ ರೂ.1 ಲಕ್ಷ ದಂಡ ಕಟ್ಟುವಂತೆಯೂ ತಿಳಿಸಿದ್ದಾರೆ. ಶಿಕ್ಷೆ ಪೂರ್ಣಗೊಂಡ ಬಳಿಕ ಮಹಿಳೆಯನ್ನು ಮರಳಿ ಸಮುದಾಯಕ್ಕೆ ಸೇರಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.
ಇದ್ರಿಂದಾಗಿ ಆಘಾತಗೊಂಡ ಮಹಿಳೆ , ಕೂಡಲೇ ಪೊಲೀಸ್ ಠಾಣೆಗೆ ತೆರಳಿ, ಪಂಚಾಯತ್ ಸದಸ್ಯರ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಇದೀಗ ಪಂಚಾಯತ್ ಸದಸ್ಯರ ವಿರುದ್ಧ ಸಾಮಾಜಿಕ ಬಹಿಷ್ಕಾರ ಕಾಯ್ದೆ 2016, ಮಹಾರಾಷ್ಟ್ರ ಜನರ ಸಂರಕ್ಷಣೆ ಸೆಕ್ಷನ್ 5 ಮತ್ತು 6 ರ ಅಡಿಯಲ್ಲಿ FIR ದಾಖಲು ಮಾಡಿಕೊಂಡು, ತನಿಖೆ ಆರಂಭಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








