ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು – ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಪಕ್ಷದಿಂದ ವಜಾ….

1 min read

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು – ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಪಕ್ಷದಿಂದ ವಜಾ….

ಮಹಾರಾಷ್ಟ್ರ ಉದ್ಧವ್ ಠಾಕ್ರೆ ಸರ್ಕಾದ ಕುರ್ಚಿ ಅಲುಗಾಡುತ್ತಿದೆ.  ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ ಶಿವಸೇನೆ ಸಚಿವ   ಏಕನಾಥ್ ಶಿಂಧೆ ಅವರನ್ನ ಪಕ್ಷದಿಂದ  ವಜಾ ಮಾಡಲಾಗಿದೆ ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಮಂಗಳವಾರ ಹೇಳಿದ್ದಾರೆ.

ಶಿಂಧೆ ಅವರ ಬದಲಿಗೆ ಅಜಯ್ ಚೌಧರಿ ಅವರನ್ನು ನೇಮಿಸಲಾಗಿದೆ ಎಂದು ಸಂಜಯ್ ರಾವುತ್ ಸುದ್ದಿಗಾರರಿಗೆ ತಿಳಿಸಿದರು. ಸೋಮವಾರ ನಡೆದ ಮಹಾರಾಷ್ಟ್ರ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಶಿವಸೇನೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಹಿನ್ನಡೆ ಅನುಭವಿಸಿದ ಒಂದು ದಿನದ ನಂತರ ರಾಜಕೀಯ ಬಿಕ್ಕಟ್ಟು ಉಂಟಾಗಿದ್ದು, ಏಕ್ ನಾಥ್ ಶಿಂಧೆ ಅಜ್ಞಾತವಾಸಕ್ಕೆ ತೆರಳಿದ್ದಾರೆ.

ಏಕ್ ನಾಥ್ ಶಿಂಧೆ ಪಕ್ಷದ ಕೆಲವು ಶಾಸಕರೊಂದಿಗೆ ಗುಜರಾತ್‌ನ ಸೂರತ್ ನಗರದ ಹೋಟೆಲ್‌ನಲ್ಲಿ ಮೊಕ್ಕಾಂ ಹೂಡಿದ್ದಾರೆ.

ಇದೇ ವೇಳೆ ಶಿಂಧೆ ಟ್ವೀಟ್ ಮಾಡಿ, “ಬಾಳಾಸಾಹೇಬರು ನಮಗೆ ಹಿಂದುತ್ವವನ್ನು ಕಲಿಸಿದ್ದಾರೆ. ಬಾಳಾಸಾಹೇಬರ ಚಿಂತನೆಗಳು ಮತ್ತು ಧರ್ಮವೀರ್ ಆನಂದ್ ದಿಘೆ ಸಾಹೇಬ್ ಅವರ ಬೋಧನೆಗಳಿಗೆ ಸಂಬಂಧಿಸಿದಂತೆ ನಾವು ಎಂದಿಗೂ ಮತ್ತು ಎಂದಿಗೂ ಅಧಿಕಾರಕ್ಕಾಗಿ ಮೋಸ ಮಾಡಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಜೂನ್ 20 ರಂದು 10 ಸ್ಥಾನಗಳಿಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳನ್ನು ಗೆಲ್ಲಿಸುವ ಮತಗಳಿದ್ದರೂ ಬಿಜೆಪಿ ಸ್ಪರ್ಧಿಸಿದ್ದ ಎಲ್ಲಾ ಐದು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಶಿವಸೇನೆ ಮತ್ತು ಎನ್‌ಸಿಪಿ ತಲಾ ಎರಡು ಸ್ಥಾನಗಳನ್ನು ಗೆದ್ದಿವೆ. ಇಬ್ಬರು ನಾಮನಿರ್ದೇಶಿತ ಅಭ್ಯರ್ಥಿಗಳ ಪೈಕಿ ಒಬ್ಬರು ಸೋತಿದ್ದರಿಂದ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd