‘ಮಹಾ’ಮಳೆಗೆ ಮಹಾರಾಷ್ಟ್ರ ತತ್ತರ – ಸಾವಿನ ಸಂಖ್ಯೆ 213ಕ್ಕೆ ಏರಿಕೆ , 8 ಮಂದಿ ನಾಪತ್ತೆ
ನೆರೆಯ ಮಾಹಾರಾಷ್ಟ್ರದಲ್ಲಿ ಬಾರೀ ಮಳೆಯಾಗ್ತಾಯಿದ್ದು, ಜನರ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.. ಮಹಾರಾಷ್ಟ್ರಕ್ಕೆ ಒಂದು ರೀತಿ ಮಳೆ ಹಾಗೂ ಕೊರೊನಾ ಶಾಪವಾಗಿದ್ದು, ಮಳೆಯ ಪ್ರಬಾವೂ ಇಲ್ಲಿಯೇ ಹೆಚ್ಚಾಗಿ ಬೀರಿದ್ರೆ , ಕೊರೊನಾ ಪರಿಣಾಮವನ್ನ ಹೆಚ್ಚಾಗಿ ಅನುಭವಿಸಿದ ರಾಜ್ಯವೂ ಇದೇ ಆಗಿದೆ..
ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರಕ್ಕೆ ಜನ ತತ್ತರಿಸಿಹೋಗಿದ್ದಾರೆ.. ಸತತವಾಗಿ ಸುರಿಯುತ್ತಿರುವ ದಾರಾಕಾರ ಮಳೆಯಿಂದಾಗಿ ಹಲವೆಡೆ ಪ್ರವಾಹ ಹಾಗೂ ಭೂಕುಸಿತ ಉಂಟಾಗಿ ಅನೇಕರು ಜೀವ ಕಳೆದುಕೊಂಡಿದ್ದಾರೆ.. ಭಾರೀ ಮಳೆಯಿಂದಾಗಿ ಈ ವರೆಗೂ 213 ಜನ ಮೃತಪಟ್ಟಿರುವುದಾಗಿ ವರದಿಯಾಗಿದೆ. ಇನ್ನೂ 8 ಮಂದಿ ಕಾನೆಯಾಗಿದ್ದಾರೆ ಎನ್ನಲಾಗಿದೆ.
ಜುಲೈ 20ರಿಂದ ಸುರಿದ ನಿರಂತರ ಮಳೆಯಿಂದಾಗಿ ರಾಯ್ಗಡ ಜಿಲ್ಲೆಯಲ್ಲಿ 95, ಸಾತಾರಾ ಜಿಲ್ಲೆಯಲ್ಲಿ 46, ರತ್ನಗಿರಿ ಜಿಲ್ಲೆಯಲ್ಲಿ 35, ಥಾಣೆ ಜಿಲ್ಲೆಯಲ್ಲಿ 15, ಕೊಲ್ಹಾಪುರ ಜಿಲ್ಲೆಯಲ್ಲಿ 7, ಮುಂಬೈ ನಗರದಲ್ಲಿ 4, ಪುಣೆಯಲ್ಲಿ 3, ಸಿಂಧುದುರ್ಗ್ನಲ್ಲಿ 4 ಮತ್ತು ಪೂರ್ವ ಮಹಾರಾಷ್ಟ್ರದ ವಾರ್ಧಾ ಮತ್ತು ಅಕೋಲಾ ಜಿಲ್ಲೆಗಳಲ್ಲಿ ತಲಾ ಇಬ್ಬರು ಮೃತಪಟ್ಟಿದ್ದಾರೆ ಎಂದು ವಿಪತ್ತು ನಿರ್ವಹಣಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ನಾಪತ್ತೆಯಾಗಿದ್ದ 8 ಮಂದಿ ಇನ್ನೂ ಪತ್ತೆಯಾಗಿಲ್ಲ. ಗಾಯಗೊಂಡ 52 ಮಂದಿ ವಿವಿಧ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ವರುಣನ ಅಬ್ಬರಕ್ಕೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.. ಆದ್ರೆ ವರುಣ ಮಾತ್ರ ಶಾಂತನಾಗುವ ಲಕ್ಷಣ ಕಾಣುತ್ತಿಲ್ಲ.. ಧಾರಾಕಾರ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.. ರಸ್ತೆಗಳು ಕೆರೆಯಂತೆ ಮಾರ್ಪಾಡಾಗಿವೆ.. ಅಲ್ಲಲ್ಲಿ ಗೋಡೆ ಕುಸಿತ ಭೂಮಿ ಕುಸಿತದಿಂದಾಗಿ ಹಲವರ ಜೀವ ಹೋಗಿದೆ.. ಈಗಾಗಲೇ ಮುಂಜಾಗ್ರತಾ ಕ್ರಮವಾಗಿ NDRF ತಂಡಗಳನ್ನ ನಿಯೋಜನೆ ಮಾಡಲಾಗಿದೆ.