ಮಹಾರಾಷ್ಟ್ರದಲ್ಲಿ ಈಗಾಗಲೇ ವರುಣನ ಆರ್ಭದಿಂದಾಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.. ಇದೀಗ ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆಯು ನೀಡಿದೆ..

ಮುಂದಿನ 24 ಗಂಟೆಗಳಲ್ಲಿ ಭಾರೀ ಪ್ರಮಾಣದ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.. ಮಂಗಳವಾರ ಬೆಳಗ್ಗೆ 8ಕ್ಕೆ ಮುಕ್ತಾಯವಾದಂತೆ ಕಳೆದ 24 ಗಂಟೆಗಳಲ್ಲಿ ಮುಂಬೈನಲ್ಲಿ 95.81 ಮಿ.ಮೀ. ಮಳೆ ಸುರಿದಿದೆ.
ಇದೇ ಅವಧಿಯಲ್ಲಿ ಪೂರ್ವ ಹಾಗೂ ಪಶ್ಚಿಮ ಉಪನಗರಗಳಲ್ಲಿ 116.73 ಮಿ.ಮೀ ಮತ್ತು 115.09 ಮಿ.ಮೀ ಮಳೆಯಾಗಿದೆ.