Maharashtra Rain | ಭಾರಿ ಮಳೆ : ಮಹಾರಾಷ್ಟ್ರದ ರತ್ನಗಿರಿಯಲ್ಲಿ ಪ್ರವಾಸ ಸ್ಥಿತಿ
ಮುಂಬೈ : ಮಹಾರಾಷ್ಟ್ರದಲ್ಲಿ Maharashtra Rain ಭಾನುವಾರದಿಂದ ಭಾರಿ ಮಳೆಯಾಗುತ್ತಿದ್ದು, ರತ್ನಾಗಿರಿ ಜಿಲ್ಲೆಯಲ್ಲಿ ಹಲವು ನದಿಗಳು ಅಪಾದ ಮಟ್ಟ ಮೀರಿ ಹರಿಯುತ್ತಿವೆ.
ಹೀಗಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ಎನ್ ಡಿಆರ್ ಎಫ್ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ.

ಖೇಡ್ ತಹಸಿಲ್ ಬಳಿಯ ಜಗಬೂದಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಇದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಆ ಪ್ರದೇಶದ ನಿವಾಸಿಗಳನ್ನು ಸ್ಥಳಾಂತರ ಮಾಡುವ ಕಾರ್ಯ ಮುಂದುವರೆದಿದೆ.
ಮಳೆ ಮುಂದುವರೆದಿರುವ ಕಾರಣ ಸೋಮವಾರ ಬೆಳಗ್ಗೆಯಿಂದಲೇ ಜಗಬುಡಿ, ವಶಿಷ್ಠಿ, ಶಾಸ್ತ್ರಿ, ಸೋನಾವಿ, ಕಾಜಲಿ, ಕೊಡವಲಿ, ಮುಚ್ಕುಂದಿ ಮತ್ತು ಬಾವನಾಡಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ.