ಮಹಾರಾಷ್ಟ್ರದ ಥಾಣೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆಯಲ್ಲಿ ಸಲುಕಿದ್ದ ದಕ್ಷಿಣ ಭಾರತದ ಇಬ್ಬರು ನಟಿಯರನ್ನು ಪೊಲೀಸರು ರಕ್ಷಿಸಿದ್ದಾರೆ. ಅಲ್ಲದೇ ಪ್ರಕರಣ ಸಂಬಂಧ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ನಗರದ ನೌಪಡ ಪ್ರದೇಶದ ಫ್ಲ್ಯಾಟ್‌ನ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಅಮೃತ್ ನಗರದ ಮಹಿಳೆಯೊಬ್ಬರು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಮಾಹಿತಿ ದೊರೆತಿದ್ದು, ಪೊಲೀಸರು ಗ್ರಾಹಕರ ವೇಷದಲ್ಲಿ ತೆರಳಿ ಕಾರ್ಯಾಚರಣೆ ನಡೆಸುವ ಮೂಲಕ ಆರೋಪಿಗಳನ್ನ ಹಿಡಿದಿದ್ದು, ನಟಿಯರನ್ನ ರಕ್ಷಣೆ ಮಾಡಿದ್ದಾರೆ.
ಇನ್ನೂ ಹಸೀನಾ ಮೆಮನ್, ಸ್ವೀಟಿ, ವಿಶಾಲ್ ಅಲಿಯಾಸ್ ಸುನಿಲ್ ಕುಮಾರ್, ಉತ್ತಮ್‌ಚಾಂದ್ ಜೈನ್ ಬಂಧಿತ ಆರೋಪಿಗಳು. ಅಲ್ಲದೇ ಆರೋಪಿಗಳಿಂದ 2.14 ಲಕ್ಷ ರೂಪಾಯಿ ನಗದು ಮತ್ತು ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.