Mahashivratri | ದಿನವಿಡೀ ಪೂಜೆ, ಉಪವಾಸ ಮಾಡಿ, ರಾತ್ರಿಯಿಡೀ ಜಾಗರಣೆ
ಶಿವಪುರಾಣದ ಪ್ರಕಾರ ಶಿವರಾತ್ರಿಯ ಆಚರಣೆಗೆ ಸಣ್ಣ ಕಥೆ
ಶಿಶಿರ ಋತುವಿನ ಮಾಘ ಮಾಸದ ಕೃಷ್ಣ ಪಕ್ಷ ಬಹುಳ ಚತುರ್ದಶಿ
ಕೃಷ್ಣ ಪಕ್ಷ ಬಹುಳ ಚತುರ್ದಶಿಯಂದು ಬರುವ ಶಿವರಾತ್ರಿ
ದಿನವಿಡೀ ಪೂಜೆ, ಉಪವಾಸ ಮಾಡಿ, ರಾತ್ರಿಯಿಡೀ ಜಾಗರಣೆ
ಭಕ್ತರ ಇಷ್ಟಾರ್ಥಗಳಿಗೆ ಎಂದಿಗೂ ನಿರಾಸೆ ಮಾಡದ ಶಿಷ್ಟ ರಕ್ಷಕ
ಇಂದು ಮಹಾಶಿವರಾತ್ರಿ, ಆದಿ ಅಂತ್ಯವಿಲ್ಲದ ಪರಶಿವನ ಆರಾಧಕರಿಗೆ ಇಂದು ಸಂಭ್ರಮದ ದಿನ.
ಶಿಶಿರ ಋತುವಿನ ಮಾಘ ಮಾಸದ ಕೃಷ್ಣ ಪಕ್ಷ ಬಹುಳ ಚತುರ್ದಶಿಯಂದು ಬರುವ ಶಿವರಾತ್ರಿಯನ್ನ ದೇಶದಾದ್ಯಂತ ಬಹಳ ಶ್ರದ್ಧಾ, ಭಕ್ತಿಯಿಂದ ಆಚರಣೆ ಮಾಡಲಾಗುತ್ತದೆ.
ದಿನವಿಡೀ ಪೂಜೆ, ಉಪವಾಸ ಮಾಡಿ, ರಾತ್ರಿಯಿಡೀ ಜಾಗರಣೆ ಮಾಡಿ ಶಿವನನ್ನು ಆರಾಧಿಸುವ ಸಂಪ್ರದಾಯವಿದೆ.
ಶಿವರಾತ್ರಿಯ ಹೆಸರಿನಂತೆ ಇಂದು ರಾತ್ರಿ ಪೂಜೆಯೇ ವಿಶೇಷ. ರಾತ್ರಿಯ ಹೊತ್ತು ಪೂಜೆ, ಭಜನೆ ನಡೆಸಲಾಗುತ್ತದೆ.
ರಾತ್ರಿ ಎಂದರೆ ಕತ್ತಲು, ಕತ್ತಲು ಎಂದರೆ ಅಜ್ಞಾನ. ಅಜ್ಞಾನವನ್ನು ಕಳೆದು ಸುಜ್ಞಾನ ಬೆಳಗಿಸು ಎಂದು ಆ ಶಿವನನ್ನು ಬೇಡುವ ಶುಭ ದಿನವೇ ಶಿವರಾತ್ರಿ.
ಹೀಗಾಗಿ ಸರಳ ಮನಸ್ಸಿನಿಂದ ಪರಶಿವನನ್ನು ನೆನದು, ಭಜಿಸಿ ಶಿವರಾತ್ರಿಯನ್ನು ಆಚರಿಸೋಣ. ಎಲ್ಲರಿಗೂ ಮಹಾ ಶಿವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು. mahashivratri-festival-special Saaksha tv