Mahatama Gandhi | ರಾಜ್ ಘಾಟ್ ನಲ್ಲಿ ಗಾಂಧಿ ಸಮಾಧಿಗೆ ಮೋದಿ ಗೌರವ ನಮನ
ನವದೆಹಲಿ : ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಮನ ಸಲ್ಲಿಸಿದ್ದಾರೆ.
ಮಹಾತ್ಮ ಗಾಂಧಿಯವರ 153 ನೇ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ರಾಜ್ ಘಾಟ್ ಗೆ ತೆರಳಿ ಮಹಾತ್ಮ ಗಾಂಧೀಜಿಗೆ ಗೌರವ ಸಲ್ಲಿಸಿದರು.
ಬಳಿಕ ಮಾತನಾಡಿದ ಪ್ರಧಾನಿಗಳು, ಭಾರತವು ಆಜಾದಿ ಕಾ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಈ ಬಾರಿಯ ಗಾಂಧಿ ಜಯಂತಿಯು ಇನ್ನೂ ಹೆಚ್ಚು ವಿಶೇಷವಾಗಲಿದೆ.

ಈ ಹಿನ್ನೆಲೆಯಲ್ಲಿ ಬಾಪು ಆದರ್ಶಗಳನ್ನು ಅನುಸರಿಸುವ ಮೂಲಕ ಖಾದಿ ಮತ್ತು ಕರಕುಶಲ ವಸ್ತುಗಳನ್ನು ಖರೀದಿಸುವಂತೆ ನಾನು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದರು.
ಇದಲ್ಲದೆ ಮೋದಿ ಅವರ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ದೆಹಲಿಯ ಪ್ರಧಾನಮಂತ್ರಿ ಸಂಗ್ರಹಾಲಯದಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಗ್ಯಾಲರಿಯ ಫೋಟೊನ್ನು ಹಂಚಿಕೊಂಡಿದ್ದಾರೆ.