ತಮ್ಮ ಹಳ್ಳಿಯ ಜನರಿಗೆ ಉಚಿತ ಲಸಿಕೆ ಕೊಡಿಸಿದ ‘ಟಾಲಿವುಡ್ ಪ್ರಿನ್ಸ್ ‘
ಹೈದರಾಬಾದ್ : ಕೊರೊನಾ ಸಮಯದಲ್ಲಿ ಬಡವರಿಗೆ ಸೋಂಕಿತರಿಗೆ ಬಾಲಿವುಡ್ , ಕಾಲಿವುಡ್ , ಟಾಲಿವುಡ್ , ಸ್ಯಾಂಡಲ್ ವುಡ್ ಎಲ್ಲಾ ಸಿನಿಮಾರಂಗದ ತಾರೆಯರು ಸಹಾಯ ಮಾಡಲು ಮುಂದಾಗಿದ್ದಾರೆ.. ನಟ , ಸೋನು ಸುದ್ , ಉಪೇಂದ್ರ , ಸಲ್ಮಾನ್ ಖಾನ್ , ಚಿರಂಜೀವಿ , ಸುದೀಪ್ ಹೀಗೆ ಹಲವರು ಬಡವರ ನೆರವಿಗೆ ಬಂದಿದ್ದಾರೆ.. ಈ ರೀತಿ ಸಹಾಯ ಮಾಡ್ತಿರುವ ಸೆಲೆಬ್ರಿಟಿಗಳಲ್ಲಿ ಸ್ಟಾರ್ ನ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಸಹ ಒಬ್ಬರು. ಇತ್ತೀಚೆಗೆ ಅಂದ್ರೆ ಮೇ 31ರಂದು ಮಹೇಶ್ ಬಾಬು ಅವರ ತಂದೆ ಸೂಪರ್ ಸ್ಟಾರ್ ಕೃಷ್ಣ ಅವರ ಹುಟ್ಟು ಹಬ್ಬವಿತ್ತು.. ಈ ಪ್ರಯುಕ್ತ ಆಂಧ್ರಪ್ರದೇಶದಲ್ಲಿರುವ ತಮ್ಮ ಸ್ವಂತ ಗ್ರಾಮ ಬುರೀಪಲೇಮ್ ನ ಜನರಿಗೆ ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ಹಾಕಿಸಿದ್ದಾರೆ.
2015ರ ಶ್ರೀಮಂತುಡು ಸಿನಿಮಾದ ವೇಳೆ ಬುರಿಪಲೇಮ್ ಗ್ರಾಮವನ್ನು ಮಹೇಶ್ ಬಾಬುರವರು ದತ್ತು ಪಡೆದಿದ್ದರು. ಸದ್ಯ ಕೊರೊನಾ ಸಂಕಷ್ಟದ ಸಮಯದಲ್ಲಿ ಗ್ರಾಮದ ಜನರಿಗೆ ಉಚಿತವಾಗಿ ಲಸಿಕೆ ಹಾಕಿಸಿದ್ದು, ಈ ಕುರಿತಂತೆ ಮಹೇಶ್ ಬಾಬುರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕೆಲವೊಂದು ಫೋಟೋವನ್ನು ಹಂಚಿಕೊಂಡಿದ್ದಾರೆ.
ಫೋಟೋ ಜೊತೆಗೆ ವ್ಯಾಕ್ಸಿನೇಷನ್‍ನಿಂದ ಮತ್ತೆ ಸಾಮಾನ್ಯ ಜೀವನ ಆರಂಭವಾಗುತ್ತದೆ ಎಂಬುವುದು ನಮ್ಮ ಭರವಸೆ. ಬುರಿಪಲೇಮ್‍ನಲ್ಲಿರುವ ಪ್ರತಿಯೊಬ್ಬರಿಗೂ ಲಸಿಕೆ ಹಾಕಿಸಿ ಸುರಕ್ಷಿಗೊಳಿಸಲು ನಾನು ಸಣ್ಣ ಪ್ರಯತ್ನ ಮಾಡುತ್ತಿದ್ದೇನೆ. ಈ ವ್ಯಾಕ್ಸಿನೇಷನ್ ಡ್ರೈವ್ ವ್ಯವಸ್ಥೆಗೊಳಿಸಲು ಸಹಾಯ ಮಾಡಿದ ಆಂಧ್ರ ಆಸ್ಪತ್ರೆಗಳಿಗೆ ಬಹಳ ಧನ್ಯವಾದಗಳು.
ಈ ಅಭೂತಪೂರ್ವ ಸಮಯದಲ್ಲಿ ಕಾರ್ಯನಿರ್ವಹಿಸಿದ ಫ್ರಂಟ್ ಲೈನ್ ವಾರಿಯರ್ಸ್ ಹಾಗೂ ಲಸಿಕೆಯ ಮಹತ್ವವನ್ನು ಅರಿತು ಮುಂದೆ ಬಂದು ತಮ್ಮ ಲಸಿಕೆ ಪಡೆದ ಗ್ರಾಮಸ್ಥರಿಗೆ ನಿಜವಾಗಲೂ ಪ್ರಶಂಸಿಸುತ್ತೇನೆ. ಲಸಿಕೆ ಪಡೆಯಿರಿ, ಎಲ್ಲರೂ ಸುರಕ್ಷಿತವಾಗಿರಿ ಎಂದು ಟ್ವೀಟ್ ಮಾಡಿದ್ದಾರೆ.
ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಮತ್ತೊಂದೆಡೆ ಅನೇಕ ಸೆಲೆಬ್ರಿಟಿಗಳು ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಹಲವರು ತಮ್ಮರನ್ನ ಕಳೆದುಕೊಂಡ ದೂಃಖದಲ್ಲಿದ್ದಾರೆ. ಇನ್ನೂ ಅನೇಕರು ಆಗಾಗ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.