ನಟ ಮಹೇಶ್ ಬಾಬು ಹಾಗೂ ರಾಜಮೌಳಿ ಕಾಂಬಿನೇಷನ್ ನಲ್ಲಿ ಹೊಸ ಚಿತ್ರಕ್ಕೆ ತಯಾರಿ ನಡೆದಿದ್ದು, ಈಗ ನಾಯಕನ ಜೊತೆ ಜೊತೆ ಡ್ಯುಯೇಟ್ ಹಾಡುವ ನಾಯಕಿ ಕುರಿತು ಬಿಗ್ ಅಪ್ಡೇಟ್ ಸಿಕ್ಕಿದೆ.
ನಟ ಮಹೇಶ್ ಬಾಬುಗೆ ಇಂಡೋನೇಷಿಯಾದ ನಟಿ ಚೆಲ್ಸಿಯಾ ಎಲಿಜಬೆತ್ ಇಸ್ಲಾನ್ (Chelsea Elizabeth Islan) ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈಗಾಗಲೇ ಚಿತ್ರದ ಪ್ರಿ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಪಾತ್ರಧಾರಿಗಳ ಹುಡುಕಾಟ ಕೂಡ ನಡೆಯುತ್ತಿದೆ. ಈಗ ಮಹೇಶ್ ಬಾಬು ಜೊತೆ ರೊಮ್ಯಾನ್ಸ್ ಮಾಡುವ ನಟಿಯ ಆಯ್ಕೆಯಾಗಿದೆ.
ನಟಿ ಚೆಲ್ಸಿಯಾ ಅವರನ್ನು ಕೆಲದಿನಗಳ ಹಿಂದೆ ಸ್ಕ್ರಿನ್ ಟೆಸ್ಟ್ ಕೂಡ ಮಾಡಲಾಗಿತ್ತು ಎನ್ನಲಾಗಿದೆ. ಈ ನಟಿ ‘ಟೇಂಟಂಗಾ ಮೆಸಾ ಗಿಟು’ ಹೆಸರಿನ ಟಿವಿ ಸರಣಿ ಮೂಲಕ ಜನಪ್ರಿಯತೆ ಗಳಿಸಿದ್ದರು. ಆದರೆ, ಚಿತ್ರ ತಂಡದಿಂದ ಮಾತ್ರ ಈ ಆಯ್ಕೆ ಅಧಿಕೃತವಾಗಿ ಹೊರ ಬಿದ್ದಿಲ್ಲ. ಆದರೆ, ಅಭಿಮಾನಿಗಳು ಮಾತ್ರ ತೆರೆಯ ಮೇಲೆ ಬೇಗ ನೋಡಬೇಕು ಎಂಬ ಕಾತುರ ವ್ಯಕ್ತಪಡಿಸುತ್ತಿದ್ದಾರೆ.








