Mahesh Babu
ಟಾಲಿವುಡ್ ನ ಸ್ಟಾರ್ ನಟ ಮಹೇಶ್ ಬಾಬು ಅವರ ತಂದೆ ಹಿರಿಯ ನಟರಾದ ಕೃಷ್ಣ ಅವರ ರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ,.
ಕೆಲ ದಿನಗಳ ಹಿಂದಷ್ಟೇ ಪತ್ನಿ ಇಂದಿರಾ ದೇವಿ ಅವರು ಇಹಲೋಕ ತ್ಯಜಿಸಿದ್ದರು.. ಅವರ ನಿಧನನ ನಂತರ ಕೃಷ್ಣ ಅವರು ಕುಗ್ಗಿ ಹೋಗಿದ್ದರು ಎನ್ನಲಾಗಿದೆ..
ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿರುವುದಾಗಿ ವರದಿಯಾಗಿದೆ.
ನಿನ್ನೆ ಸಂಜೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ನಂತರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
350ಕ್ಕೂ ಅಧಿಕ ಸಿನಿಮಾಗಳಲ್ಲಿ ಕೃಷ್ಣ ನಟಿಸಿದ್ದಾರೆ. ಅವರಿಗೆ ಅಭಿಮಾನಿಗಳಿಂದ ಸೂಪರ್ ಸ್ಟಾರ್ ಬಿರುದು ಸಿಕ್ಕಿದೆ..