ಸೋಲಿಗೆ ಅಸಲಿ ಕಾರಣ ಬಿಚ್ಚಿಟ್ಟ ವಿರಾಟ್

1 min read
Main-reason-our-loss virat kohli saaksha tv

ಸೋಲಿಗೆ ಅಸಲಿ ಕಾರಣ ಬಿಚ್ಚಿಟ್ಟ ವಿರಾಟ್

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿದೆ.  

ಸರಣಿ ಗೆಲ್ಲುವ ವಿಶ್ವಾಸದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆಯಾಗಿದ್ದು, ಟೀಂ ಇಂಡಿಯಾದ ನಾಯಕ ವಿರಾಟ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಕಳಪೆ ಬ್ಯಾಟಿಂಗ್ ಕಾರಣ ನಮ್ಮ ಬ್ಯಾಟಿಂಗ್ ಲೈನಪ್ ಕುಸಿಯಿತು. ನಾವು ಬೇರೆ ಕಾರಣ ಹೇಳಿ ತಪ್ಪಿಸಿಕೊಳ್ಳಲು ಹೋಗುವುದಿಲ್ಲ.  

ಎದುರಾಳಿ ಬೌಲರ್‌ಗಳು ನಮ್ಮ ಮೇಲೆ ಒತ್ತಡ ಹೆಚ್ಚಿಸುವಲ್ಲಿ ಯಶಸ್ವಿಯಾದರು. ಹೀಗಾಗಿ ನಾವು ಒತ್ತಡಕ್ಕೆ ಸಿಲುಕಿ ನಿರಾಶೆಗೊಂಡೆವು.

ನಾವು ದಕ್ಷಿಣ ಆಫ್ರಿಕಾ ನೆಲದಲ್ಲಿ ಇತಿಹಾಸ ನಿರ್ಮಿಸುತ್ತೇವೆ ಎಂದು ಎಲ್ಲರು ಅಂದುಕೊಂಡಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ ಎಂಬುದು ವಾಸ್ತವ.

Main-reason-our-loss virat kohli saaksha tv

ನಿರ್ಣಾಯಕ ಕ್ಷಣಗಳಲ್ಲಿ ನಾವು ಏಕಾಗ್ರತೆಯನ್ನು ಕಳೆದುಕೊಂಡಿದ್ದು, ಅದೇ ಸಮಯದಲ್ಲಿ ದಕ್ಷಿಣ ಆಫ್ರಿಕಾದ ಬೌಲರ್‌ಗಳು  ಅದ್ಭುತವಾಗಿ ಬೌಲಿಂಗ್ ಮಾಡಿದರು.

ವಿದೇಶದಲ್ಲಿ ಒಳ್ಳೆ ಜೋಷ್ ನಲ್ಲಿದ್ದಾಗ ಅದನ್ನು ಕಾಪಾಡಿಕೊಂಡು ಹೋಗುವುದು ಮುಖ್ಯ. ಅದರಲ್ಲಿ ನಾವು ವಿಫಲರಾದೆವು ಎಂದು ಬೇಸರ ಹೊರಹಾಕಿದರು.

ಡಿಆರ್ ಎಸ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ವಿರಾಟ್,  ಮೈದಾನದ ಪರಿಸ್ಥಿತಿ ಏನಾಗಿದೆ ಎಂಬುದು ಹೊರಗಿನವರಿಗೆ ಗೊತ್ತಿಲ್ಲ.

ನಾನು ಅದನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸುವುದಿಲ್ಲ ಆದರೆ ಆ ಸಮಯದಲ್ಲಿ  ವಿಕೆಟ್ ಪಡೆದಿದ್ದರೆ ಪರಿಸ್ಥಿತಿ ವಿಭಿನ್ನವಾಗಿರುತ್ತಿತ್ತು.

ಆ ಘಟನೆಯಿಂದ  ಸೋತಿದ್ದೇವೆ ಎಂದು ಹೇಳುವುದಿಲ್ಲ. ಎದುರಾಳಿ ಬ್ಯಾಟ್ಸ್‌ಮನ್‌ಗಳ ಮೇಲೆ ಒತ್ತಡ ಹೇರಲು ನಾವು ವಿಫಲರಾಗಿದ್ದೇವೆ ಎಂಬುದು ಸತ್ಯಎಂದು ಕೊಹ್ಲಿ ಹೇಳಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd