ಕೋವಿಡ್ ಸಂಕಷ್ಟ – ಸಿನಿಮಾ ಕಾರ್ಮಿಕರಿಗೆ ಆಹಾರ ವಿತರಿಸಿದ ‘ಮಜಾ ಟಾಕೀಸ್’ ರೆಮೋ
ಬೆಂಗಳೂರು : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಇದೀಗ ಮಜಾ ಟಾಕೀಸ್ ಖ್ಯಾತಿಯ ಗಾಯಕಿ ರೆಮೋ ಕೂಡ ಕೈ ಜೋಡಿಸಿದ್ದು, ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಸಂಗೀತಗಾರರು, ಕೇಶ ವಿನ್ಯಾಸಕರು ಸೇರಿದಂತೆ ತೀರ ಕಷ್ಟದಲ್ಲಿರುವ ಸಿನಿಮಾ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಿದ್ದಾರೆ.
ಕಿಟ್ ವಿತರಣೆಯ ಫೋಟೋಗಳನ್ನು ರೆಮೋ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ‘ಸಂಗೀತಗಾರರು, ಕೇಶ ವಿನ್ಯಾಸಕರು ಮತ್ತು ತೀವ್ರ ಅಗತ್ಯವಿರುವ ಜನರಿಗೆ ರೇಷನ್ ಕಿಟ್ ವಿತರಿಸಲಾಯಿತು. ಇಂಥ ಸಮಯದಲ್ಲಿ ಸಹಾಯ ಮಾಡೋಣ, ಅವರ ತಟ್ಟೆಯಲ್ಲಿ ಒಂದು ತಿಂಗಳು ಆಹಾರ ಇರಬೇಕು’ ಎಂದು ಬರೆದುಕೊಂಡಿದ್ದಾರೆ.
ಅನೇಕ ಸೆಲೆಬ್ರಿಟಿಗಳು ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಹಲವರು ತಮ್ಮರನ್ನ ಕಳೆದುಕೊಂಡ ದೂಃಖದಲ್ಲಿದ್ದಾರೆ. ಇನ್ನೂ ಅನೇಕರು ಆಗಾಗ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








